ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಷ್ಟ್ರಾದ್ಯಂತ ಪಕ್ಷದ ನಿಷ್ಠಾವಂತ 40 ಯುವಕರ ಸಂದರ್ಶನ ನಡೆಸಿದ್ದು, ಅವರಲ್ಲಿ ಕರ್ನಾಟಕದ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ. ಶ್ರೀನಿವಾಸ್
ಆಯ್ಕೆಯಾಗಿದ್ದರು.
Advertisement
ಆದರೆ, ಅಂತಿಮವಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ರಿಜ್ವಾನ್ ಅವರನ್ನು ಕೈ ಬಿಡಲಾಗಿದೆ. ಬಿ.ವಿ. ಶ್ರೀನಿವಾಸ್ ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದಾರೆ. ಜತೆಗೆ ರಾಜಸ್ಥಾನ ಯುವ ಘಟಕದ ಅಧ್ಯಕ್ಷ ಅಶೋಕ್ ಚಾಂದನಾ, ತೆಲಂಗಾಣದ ಶಾಸಕ ವಂಶಿ ರೆಡ್ಡಿ, ಉತ್ತರ ಪ್ರದೇಶ ಯುವ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಹರ್ಷವರ್ಧನ್ ಹಾಗೂ ಮಹಾರಾಷ್ಟ್ರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಶ್ವಜಿತ್ ಕದಂ ಪೈಪೋಟಿ ನಡೆಸಿದ್ದಾರೆ. ಇನ್ನೆರಡು ದಿನದಲ್ಲಿ ರಾಹುಲ್ ಗಾಂಧಿ ಯುವ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರ ಆಯ್ಕೆ ನಡೆಸಲಿದೆ.