Advertisement
ಹೊಸದಾಗಿ ಸ್ಥಳ ನಿಯುಕ್ತಿಗೊಂಡ ಹೆಚ್ಚುವರಿ ಶಿಕ್ಷಕರಿಗೆ ಆದ್ಯತಾ ಕ್ಲೇಮ್ ಮಾಡಿಕೊಳ್ಳಲು ಇದು ಕೊನೆಯ ಅವಕಾಶ ಎಂದು ಶಾಲಾ ಶಿಕ್ಷಣ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.ಸ್ವೀಕೃತವಾದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಅಂಗೀಕರಿಸಲು ಅಥವಾ ತಿರಸ್ಕರಿಸಲು ಜೂನ್ 27 ಕೊನೆದ ದಿನವಾಗಿದೆ. ಅನಂತರ ಯಾವುದೇ ಬದಲಾವಣೆಗೆ ಅವಕಾಶವಿಲ್ಲ ಎಂದು ಶಾಲಾ ಶಿಕ್ಷಣ ಆಯುಕ್ತ ಆರ್. ವಿಶಾಲ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಈವರೆಗೆ ಒಟ್ಟು 7,450 ಶಿಕ್ಷಕರು ಹೊಸ ಸ್ಥಳಕ್ಕೆ ನಿಯುಕ್ತಿಗೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಪ್ರಾಥಮಿಕ ಶಾಲೆಯಲ್ಲಿ 1,077 ಮುಖ್ಯ ಶಿಕ್ಷಕರು, 4,296 ಸಹಾಯಕ ಶಿಕ್ಷಕರು, 52 ಕಲಾ ಶಿಕ್ಷಕರು ಮತ್ತು 771 ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ. ಹೈಸ್ಕೂಲಿನಲ್ಲಿ 537 ಮುಖ್ಯ ಶಿಕ್ಷಕರು, 710 ಕಲಾ ಶಿಕ್ಷಕರು ಮತ್ತು ಮೂವರು ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ. ಅಕ್ರಮದ ಆರೋಪ
ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಲೋಪಗಳಾಗಿವೆ. ಅಧಿಕಾರಿಗಳು ತಮ್ಮಿಚ್ಛೆಯಂತೆ ಶಿಕ್ಷಕರ ವರ್ಗಾವಣೆ ಮಾಡಿದ್ದಾರೆ ಎಂದು ಹಲವು ಶಿಕ್ಷಕರು ದೂರುತ್ತಿದ್ದಾರೆ. ನಗರದಲ್ಲಿದ್ದ ಹೆಚ್ಚುವರಿ ಶಿಕ್ಷಕರನ್ನು ಮತ್ತೆ ನಗರದೊಳಗೆ ವರ್ಗ ಮಾಡಲಾಗಿದೆ. ಇದರಿಂದ ಹಳ್ಳಿ, ಪಟ್ಟಣಗಳಲ್ಲಿ ಸೇವೆ ಸಲ್ಲಿಸಿದ್ದ ಶಿಕ್ಷಕರಿಗೆ ನಗರಕ್ಕೆ ವರ್ಗವಾಗುವ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ. ಇದರಲ್ಲಿ ಅಧಿಕಾರಿಗಳ ಕೈವಾಡವಿದೆ ಎಂಬ ಆರೋಪವನ್ನು ಶಿಕ್ಷಕರು ಮಾಡುತ್ತಿದ್ದಾರೆ.