Advertisement
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 26 ರಿಂದ ವಿವಿ ಆವರಣ ಸೇರಿದಂತೆ ಎಲ್ಲ ಪದವಿ ಕಾಲೇಜುಗಳಲ್ಲಿ ಬೋಧಕ ತರಗತಿಗಳು (ಆಫ್ಲೈನ್) ಆರಂಭವಾಗಲಿವೆ. ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದುಕೊಂಡು ತರಗತಿಗಳಿಗೆ ಕೋವಿಡ್ ನಿಯಮ ಪಾಲನೆಯೊಂದಿಗೆ ಹಾಜರಾಗಲು ಸೂಚಿಸಲಾಗಿದೆ ಎಂದರು.
Related Articles
Advertisement
ಮಧ್ಯಂತರ ಸಮ ಸೆಮಿಸ್ಟರ್‌ಗಳಿಗೆ ಸಂಬಂಧಿಸಿದಂತೆ ಆ ಸೆಮಿಸ್ಟರ್ ಗಳ ಅಂತರಿಕ ಅಂಕಗಳು ಹಾಗೂ ಹಿಂದಿನ ಸೆಮಿಸ್ಟರ್ ನ ಅಂಶಗಳ ಆಧಾರದ ಮೇಲೆ (ಯುಜಿಸಿ 20200 ನಿಯಮಗಳನ್ವಯ) ಪಲಿತಾಂಶ ಪ್ರಕಟಿಸಲಾಗುವುದು. ಸ್ನಾತಕೋತ್ತರ ಹಂತದಲ್ಲಿ 2ನೇ ಸೆಮಿಸ್ಟರ್ ಅವಧಿಯ ಪರೀಕ್ಷೆ ರದ್ದುಪಡಿಸಲಾಗಿದ್ದು, ಕೇವಲ ಆಂತರಿಕ ಅಂಕ ಮತ್ತು ಹಿಂದಿನ ಸೆಮಿಸ್ಟರ್‌ಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ಘೋಷಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ಸೆಮಿಸ್ಟರ್‌ಗಳಿಗೆ ಬರುವ ಸಪ್ಟೆಂಬರ 15 ರಿಂದ ಪರೀಕ್ಷೆಗಳು ಪಾರಂಭವಾಗಲಿವೆ. 2021-22ರ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ತರಗತಿಗಳು ಬರುವ ಅಕ್ಟೋಬರ್ ಒಂದರಿಂದ ಪ್ರಾರಂಭಗೊಳ್ಳಲಿದೆ ಎಂದರು.
ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳಲ್ಲಿ ಕೋವಿಡ್ ನಿಯಮಾನುಸಾರ ಮುಂಜಾಗ್ರತಾ ಕ್ರಮ ಜರುಗಿಸಲು ಸೂಚಿಸಿಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಲಸಿಕೆ ಪಡೆದು ತರಗತಿಗಳಿಗೆ ಸೂಚಿಸಲಾಗಿದೆ. 108 ಲಕ್ಷ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ‘ಲಸಕೀಕರಣದಲ್ಲಿ ಶೇಕಡಾ 98ರಷ್ಟು ಪ್ರಗತಿ ಸಾಧನೆಯಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಡಾ.ಹನುಮಂತಪ್ಪ, ಕೆ.ಟಿ., ಮೌಲ್ಯಮಾಪನ ಕುಲಸಚಿವರ ಡಾ.ಎಚ್. ನಾಗರಾಜ ಇದ್ದರು.