Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 20ರಂದು ಸಂಜೆ 5 ಗಂಟೆಗೆ ಸಂಸ್ಥಾಪನಾ ದಿನಾಚರಣೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಚಾಲನೆ ನೀಡಲಿದ್ದು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಂತರ ಹಿರಿಯ ಸಾಹಿತಿ ಡಾ| ಗುರುಲಿಂಗ ಕಾಪಸೆ ಅವರಿಗೆ ಸಿರಿಗನ್ನಡಂ ಗೆಲ್ಗೆ ರಾ.ಹ. ದೇಶಪಾಂಡೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಸಂಜೀವ ಕುಲಕರ್ಣಿ ಅವರು ರಾ.ಹ. ದೇಶಪಾಂಡೆ ಅವರ ಕುರಿತು ಮಾತನಾಡಲಿದ್ದು, ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ| ಮಲ್ಲಿಕಾ ಘಂಟಿ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡಲಿದ್ದಾರೆ. ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
Related Articles
Advertisement
ಡಾ| ಪಾಟೀಲ ಪುಟ್ಟಪ್ಪ ಪ್ರಶಸ್ತಿ ಪ್ರದಾನ: ಸಂಯುಕ್ತ ಕರ್ನಾಟಕ ಪತ್ರಿಕೆಗೆ ʼಕನ್ನಡ ಪ್ರಪಂಚ ಡಾ| ಪಾಟೀಲ ಪುಟ್ಟಪ್ಪ’ ಪ್ರಶಸ್ತಿಯನ್ನು ಜು. 26ರಂದು ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತಿದೆ. ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಅವರು ಡಾ| ಪಾಪು ಅವರ ಕುರಿತು ಮಾತನಾಡಲಿದ್ದಾರೆ. ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷ ಯು.ಬಿ. ವೆಂಕಟೇಶ, ಧರ್ಮದರ್ಶಿಗಳಾದ ಅಶೋಕ ಹಾರನಹಳ್ಳಿ, ಸಮೂಹ ಸಂಪಾದಕರಾದ ಹುಣಸವಾಡಿ ರಾಜನ್ ಆಗಮಿಸಲಿದ್ದಾರೆ. ಹಿರಿಯ ಪತ್ರಕರ್ತೆ ಕೆ.ಎಚ್. ಸಾವಿತ್ರಿ ಸಂಯುಕ್ತ ಕರ್ನಾಟಕದ ಕುರಿತು ಮಾತನಾಡಲಿದ್ದಾರೆ.
ಸಂಜೆ 7 ಗಂಟೆಗೆ ಸಮಾರೋಪ ನಡೆಯಲಿದ್ದು, ಡಾ| ಶಾಂತಿನಾಥ ದಿಬ್ಬದ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಉಚ್ಚ ನ್ಯಾಯಾಲಯದ ನಿಕಟಪೂರ್ವ ಸಹಾಯಕ ಸಾಲಿಸಿಟರ್ ಜನರಲ್ ಕೆ.ಬಿ. ನಾವಲಗಿಮಠ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ಪಾಲ್ಗೊಳ್ಳಲಿದ್ದು, ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.