Advertisement
ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಏಪ್ರಿಲ್ 6ರ ವರೆಗೆ ಉಷ್ಣ ಅಲೆ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ತಾಪಮಾನ ಮಿತಿ ಮೀರುವ ಹಂತಕ್ಕೆ ತಲುಪಿರುವುದು ಇಲ್ಲಿನ ಜನರಲ್ಲಿ ಆತಂಕ ಹುಟ್ಟಿಸಿದೆ. ಜತೆಗೆ ಏಪ್ರಿಲ್ 5ರ ವರೆಗೆ ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಳಗಾವಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿರುವ ಮುನ್ನೆಚ್ಚರಿಕೆ ಕೊಡಲಾಗಿದೆ.
Related Articles
ಏ.6 ರಿಂದ 8ರ ವರೆಗೆ ದ.ಕನ್ನಡ, ಬೀದರ್, ಕಲಬುರಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ. ಆದರೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿವೆ. ಏ.7ರಂದು ಚಿಕ್ಕಮಗಳೂರು ಹಾಗೂ 8ರಂದು ಉಡುಪಿ, ಉತ್ತರ ಕನ್ನಡ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
Advertisement
ಮಂಗಳವಾರ ಎಲ್ಲೆಲ್ಲಿ ಎಷ್ಟೆಷ್ಟು ತಾಪಮಾನ?: ಕಲಬುರಗಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಉಷ್ಣಾಂಶ 41.6 ಡಿ.ಸೆ. ದಾಖಲಾದರೆ, ಬಾಗಲಕೋಟೆ 40.7, ವಿಜಯಪುರ 39.5, ರಾಯಚೂರು 39.6, ಕೊಪ್ಪಳ 39.2, ಗದಗ 38.7, ಮಂಗಳೂರು 35.4, ಬೀದರ್ 38, ಬೆಳಗಾವಿ 37.6, ಹಾವೇರಿ 38.4, ಚಿತ್ರದುರ್ಗ 38, ದಾವಣಗೆರೆ 38.5, ಶಿವಮೊಗ್ಗ 37.6, ಮಂಡ್ಯ 37.4 ಡಿ.ಸೆ. ಗರಿಷ್ಠ ಉಷ್ಣಾಂಶ ಮಂಗಳವಾರ ದಾಖಲಾಗಿದೆ.
ಹೀಗೆ ಮುನ್ನೆಚ್ಚರಿಕೆ ವಹಿಸಿ*ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಿರಿ
*ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲ, ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ
*ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಛತ್ರಿ, ಟೋಪಿ, ಬೂಟು ಅಥವಾ ಚಪ್ಪಲಿ ಬಳಸಿ
*ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆ ತಪ್ಪಿಸಿ
*ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ
*ದೇಹವನ್ನು ನಿರ್ಜಲೀಕರಣಗೊಳಿಸುವ ಮದ್ಯ, ಚಹಾ, ಕಾಫಿ ಮತ್ತು ಕಾಬೊìನೇಟೆಡ್ ತಂಪು ಪಾನೀಯಗಳನ್ನು ಸೇವಿಸದಿರಿ
*ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ
*ನಿಮಗೆ ಮೂಛೆì ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ
*ಓಆರ್‌ಎಸ್, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ
*ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ
*ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್ ಬಳಸಿ, ರಾತ್ರಿಯಲ್ಲಿ ಕಿಟಕಿ ತೆರೆಯಿರಿ
*ಫ್ಯಾನ್, ಒ¨ªೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ