Advertisement
ಈ ಹಿಂದೆ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಕಾರು ಜೀಪು, ವ್ಯಾನ್, ಟೆಂಪೋ ಟ್ರಾವೆಲರ್ ಹಾಗೂ ಸಾಮಾನ್ಯ ಬಸ್ಸು, ರಾಜಹಂಸ, ಐರಾವತ, ಖಾಸಗಿ ಲಕ್ಸುರಿ ಬಸ್ಸುಗಳ ಸಂಚಾರಕ್ಕೆ ಶಿರಾಡಿಘಾಟ್ ರಸ್ತೆ ಮುಕ್ತಗೊಳಿಸಲಾಗಿತ್ತು. ನ.15ರ ಬೆಳಗ್ಗೆ 6 ಗಂಟೆಯಿಂದ ಎಲ್ಲಾ ಬಗೆಯ ವಾಹನಗಳಗಳ ಸಂಚಾರಕ್ಕೂ ಅಂದರೆ ಭಾರೀ ವಾಹನಗಳಾದ ಎಲ್.ಸಿ., ಬುಲೆಟ್ ಟ್ಯಾಂಕರ್, ಕಾರ್ಗೊ ಕಂಟೈನರ್, ಲಾಂಗ್ ಚಾಸೀಸ್ ವಾಹನಗಳು ಸೇರಿದಂತೆ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಶಿರಾಡಿಘಾಟ್ ರಸ್ತೆಯನ್ನು ಮುಕ್ತಗೊಳಿಸಿ ಹಾಸನ ಜಿಲ್ಲಾಧಿಕಾರಿಯವರು ಅದೇಶ ಹೊರಡಿಸಿದ್ದಾರೆ.
Related Articles
Advertisement
ಹಿಂದೆಯೇ ಅನುಮತಿ:ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಭೂಕುಸಿತ ಉಂಟಾಗಿತ್ತು. ಹೀಗಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಆಗಸ್ಟ್‌ನಲ್ಲಿ ರದ್ದುಗೊಳಿಸಲಾಗಿತ್ತು. ರಸ್ತೆ ತಾತ್ಕಾಲಿಕ ದುರಸ್ತಿ ಮಾಡಿದ ನಂತರ ಸೆಪ್ಟೆಂಬರ್‌ನಲ್ಲಿ ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ನಂತರ ಸಾರ್ವಜನಿಕ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ನಾಲ್ಕು ಕಡೆ ಏಕಮುಖ ಸಂಚಾರವಿದ್ದರಿಂದ ಘನವಾಹನಗಳ ವಾಹನಕ್ಕೆ ಅನುಮತಿ ನೀಡಿರಲಿಲ್ಲ. ಆದರೆ, ಸಾರ್ವಜನಿಕ ವಲಯದಿಂದ ಘನವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ವ್ಯಾಪಕ ಒತ್ತಡಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ 12ರಿಂದ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು. ಆದರೆ, ಹಾಸನಾಂಬ ಉತ್ಸವ ಇದ್ದ ಕಾರಣ ಇಲ್ಲಿನ
ಶಿರಾಡಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡದ ಕಾರಣ ಸುತ್ತಿ ಬಳಸಿ ಕರಾವಳಿ ಜಿಲ್ಲೆಗೆ ಹೋಗಬೇಕಿತ್ತು. ಇದರಿಂದ ಸಾವಿರಾರ ರೂ. ಇಂಧನ ವಿನಾಕಾರಣ ಪೋಲಾಗುತ್ತಿತ್ತು. ಇದೀಗ ಶಿರಾಡಿ ಘಾಟಿ ರಸ್ತೆ ಘನ ವಾಹನಗಳ ಸಂಚಾರಕ್ಕೂ ಮುಕ್ತಗೊಳಿಸಿರುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ.
ಸಂಜೀತ್‌ಶೆಟ್ಟಿ, ಶಿರಾಡಿ ರಸ್ತೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ.