Advertisement
ಗುರುವಾರ ದಿಲ್ಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ವಿವಿಧ ಶ್ರೇಣಿಯ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಿದರು.
ರಾಜ್ಯದಲ್ಲಿ ಪ್ರತೀ ದಿನ 92ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀಟರ್‌ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದೆ. ರಾಜ್ಯ ಸರಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತೀ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನವನ್ನು ನಂತರ 3 ರೂ.ಗೆ ಏರಿಕೆ ಮಾಡಲಾಯಿತು. ನಾನು ಮುಖ್ಯಮಂತ್ರಿಯಾದ ಅನಂತರ 5 ರೂ.ಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತೀ ದಿನ 5 ಕೋಟಿ ರೂ.ಗಳನ್ನು ಸರಕಾರ ವೆಚ್ಚ ಮಾಡುತ್ತಿದೆ ಎಂದು ಹೇಳಿದರು.