Advertisement

Jaipur: ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಗುಂಡಿಕ್ಕಿ ಹತ್ಯೆ

03:39 PM Dec 05, 2023 | sudhir |

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಅಪರಿಚಿತ ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈದು ಪರಾರಿಯಾದ ಘಟನೆ ಮಂಗಳವಾರ ಜೈಪುರದಲ್ಲಿ ನಡೆದಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಗೊಗಮೆಡಿ ಅವರು ಮಧ್ಯಾಹ್ನ 1.45 ರ ಸುಮಾರಿಗೆ ತನ್ನ ಮನೆಯ ಹೊರಗೆ ನಿಂತಿದ್ದಾಗ ಸ್ಕೂಟರ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಗಂಭೀರ ಗಾಯಗೊಂಡಿದ್ದ ಗೊಗಮೆಡಿಯವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಗೊಗಮೆಡಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ವೇಳೆ ಗೊಗಮೆಡಿ ಜೊತೆಗಿದ್ದ ಗನ್ ಮ್ಯಾನ್ ಅಜಿತ್ ಸಿಂಗ್ ಅವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: IPL Auction: ಈ ಆಟಗಾರರ ಮೇಲೆ ಕಣ್ಣಿಟ್ಟಿವೆ ಹಲವು ಫ್ರಾಂಚೈಸಿಗಳು

Advertisement

Udayavani is now on Telegram. Click here to join our channel and stay updated with the latest news.

Next