Advertisement

Karwar; 67ನೇ ಮಹಾಪರಿನಿರ್ವಾಣ ದಿನ ಆಚರಣೆ

11:14 PM Dec 06, 2023 | Team Udayavani |

ಕಾರವಾರ : ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಮ್ಮ ತತ್ವ ಸಿದ್ದಾಂತಗಳ ಮೂಲಕ ಕ್ರಾಂತಿಕಾರಕ ಗುರಿಗಳನ್ನು ಹೊಂದಿದ್ದರು ಎಂದು ಪ್ರೊಫೆಸರ್ ಆರ್.ಕೆ.ಹುಡುಗಿ ಹೇಳಿದರು.

Advertisement

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಡಾ. ಬಾಬಾ ಅವರು ಕೇವಲ ಭಾರತಕ್ಕೆ ಸೀಮಿತವಾಗಿರದೆ ಜಾಗತಿಕ ನಾಯಕರಾದವರು. ಅವರ ತತ್ವದ ಸತ್ವವನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು. ಅಂಬೇಡ್ಕರ್ ಅವರನ್ನು ಜೀವಂತವಾಗಿ ಉಳಿಸಿಕೊಳ್ಳಬೇಕಾದರೆ ಅವರು ಪ್ರತಿಪಾದಿಸಿದ ವಿಚಾರಧಾರೆಗಳನ್ನು, ದೇಶಗೊಸ್ಕರ ಕಂಡ ಕನಸುಗಳನ್ನು ನನಸು ಮಾಡಲು ಪ್ರಯತ್ನಿಸಬೇಕು ಎಂದರು .

ಸದ್ಯದ ಪರಿಸ್ಥಿತಿಯಲ್ಲಿ ನೀರಿಗೆ, ಮೇವಿಗೆ, ಅನ್ನಕ್ಕೆ ಬರ ಬಂದರೆ ಎಲ್ಲಿಂದಾದರೂ ತರಬಹುದು ಆದರೆ ಮನುಷ್ಯತ್ವಕ್ಕೆ ಬರ ಬಂದರೆ ತರಲು ಸಾಧ್ಯವಿಲ್ಲ ಹಾಗಾಗಿ ಜನರು ಮೊದಲು ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳುವ ಅವಶ್ಯಕತೆಯಿದೆ ಎಂದರು.

ಪುರುಷ ಪ್ರಧಾನ ಸಮಾಜದಲ್ಲಿ ಮಾನವೀಯತೆ ಸಂಪೂರ್ಣವಾಗಿ ನೆಲ ಕಚ್ಚಿದಾಗ ಮಹಿಳೆಯರ ಹಕ್ಕುಗಳಿಗಾಗಿ ಅಂಬೇಡ್ಕರ್ ಹೋರಾಡಿ, ಮಾನವೀಯ ಮೌಲ್ಯಗಳಿಗೆ ಪುನರುಜ್ಜೀವನ ನೀಡಿದರು. ಮಹಿಳೆಯರಿಗಾಗಿ ವಿಶೇಷ ವಿಚಾರಧಾರೆಗಳನ್ನು ಮಂಡಿಸಿ ಅವರನ್ನು ಸಂಘಟಿಸಿದರು. ಸಮಾಜೀಕರಣ ಪ್ರಕ್ರಿಯೆಯಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಬೆಳೆಯಬೇಕು ಎಂಬ ಮಹತ್ವಾಕಾಂಕ್ಷೆಯನ್ನು ಹೊಂದಿದ್ದರು. ಮಹಿಳೆಯರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು, ಕನಸುಗಳನ್ನು ನನಸು ಮಾಡಲು ಛಲವಿದ್ದಾಗ ಮಾತ್ರ ಸಮಾಜದಲ್ಲಿ ಸಬಲರಾಗುತ್ತಾರೆ ಎಂದರು.

Advertisement

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ ಪ್ರತಿಯೊಬ್ಬರು ಅಂಬೇಡ್ಕರ್ ಬರೆದ ಸಂವಿಧಾನದ ಫಲಾನುಭವಿಗಳು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ಹೆಮ್ಮೆಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ. ಅಂಬೇಡ್ಕರ್ ಜ್ಞಾನದ ಸಂಪತ್ತನ್ನು ಮೆಚ್ಚಿ ಇಡಿ ವಿಶ್ವ ಅವರ ಹುಟ್ಟಿದ ದಿನವನ್ನು ‘ವಿಶ್ವ ಜ್ಞಾನದ ದಿನ’ವಾಗಿ ಆಚರಿಸಲಾಗುತ್ತಿದೆ. ಇಂತಹ ಮಹಾನ ವ್ಯಕ್ತಿ ಭಾರತದಲ್ಲಿ ಹುಟ್ಟಿದಕ್ಕೆ ಹೆಮ್ಮೆಪಡಬೇಕು ಎಂದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಪ್ರೊ.ಆರ್.ಕೆ. ಹುಡುಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next