Advertisement

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಸ್ಥಳದಲ್ಲೇ ಮೂವರ ಸಾವು

06:08 PM Jun 29, 2018 | Team Udayavani |

ಕಾರವಾರ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ.

Advertisement

ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ  ಸ್ವಿಪ್ಟ್  ಕಾರು ಗುದ್ದಿದ ಪರಿಣಾಮವಾಗಿ  ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮಾಜಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಚಿತ್ತಾಕುಲ ಪೋಲೀಸರು ದೌಡಾಯಿಸಿದ್ದಾರೆ‌.

ರಸ್ತೆ ಅಪಘಾತದಲ್ಲಿ  ಮೃತಪಟ್ಟವರನ್ನು ಚಾಲಕ ಶಂಭು , ಶ್ರೀನಿವಾಸ್ ಹರಿಕಾಂತ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next