Advertisement

Karwar: ಉತ್ತರಕನ್ನಡ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕಂಪಿಸಿದ ಭೂಮಿ: ಡಿಸಿ ಹೇಳಿದ್ದೇನು?

09:47 PM Dec 01, 2024 | Team Udayavani |

ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ತಾಲೂಕಿನ ಕೆಲ ಗ್ರಾಮಗಳಲ್ಲಿ ರವಿವಾರ ಮೂರು ಸೆಕೆಂಡ್‌ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗಿದೆ. ಆದರೆ ಭೂಮಿ ಕಂಪಿಸಿಲ್ಲ. ಜನರು ಭಯಪಡಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ.

Advertisement

ಸಿದ್ದಾಪುರ ತಾಲೂಕಿನ ಹೆಗ್ಗರಣಿ, ಹೇರೂರು ಹಾಗೂ ಶಿರಸಿ ತಾಲೂಕಿನ ಸಂಪಖಂಡ, ಗೋಳಿಮಕ್ಕಿ, ಮತ್ತಿಘಟ್ಟಾ, ರಾಗಿ ಹೊಸಳ್ಳಿ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ. ಮನೆಯಲ್ಲಿದ್ದವರಿಗೆ ಏಕಾಏಕಿ ಮನೆ ವಸ್ತುಗಳು ಅಲುಗಾಡಿದ ಅನುಭವವಾಗಿದೆ.

ಹಲವರಿಗೆ ಕುಳಿತ ಖುರ್ಚಿ, ಸೋಫಾ ಅಲುಗಾಡಿದ ಅನುಭವವಾಗಿದ್ದು, ಭೂಕಂಪ ಉಂಟಾಗಿರಬಹುದು ಎಂದು ಮನೆಯಿಂದ ಹೊರಗೆ ಬಂದಿದ್ದಾರೆ.

ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಲಕ್ಷ್ಮೀ ಪ್ರಿಯಾ ಅವರು, ಜಿಲ್ಲಾಧಿಕಾರಿ ಕಚೇರಿ ನೈಸರ್ಗಿಕ ಪ್ರಕೃತಿ ವಿಕೋಪ ಕೇಂದ್ರದಲ್ಲಿ ವಿಚಾರಿಸಿದ್ದೇನೆ. ಯಾವುದೇ ರೀತಿಯ ಭೂಕಂಪನವಾಗಿಲ್ಲ. ರಿಕ್ಟರ್‌ ಮಾಪನದಲ್ಲೂ ಭೂಕಂಪನ ದಾಖಲಾಗಿಲ್ಲ, ಹೀಗಾಗಿ ಜನ ಭಯಪಡುವ ಅವಶ್ಯಕತೆ ಇಲ್ಲ. ಇನ್ನು ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿಗಾಗಿ ಯಾವುದೇ ಸ್ಫೋಟ ನಡೆಸಿಲ್ಲ. ಜನರು ಹೇಳಿರುವ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next