Advertisement
ಮಾಧ್ಯಮದವರೊಂದಿಗೆ ಬುಧವಾರ ನಡೆಸಿದ ಗೂಗಲ್ ಮೀಟ್‌ನಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕೆಲವು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ದೇವಸ್ಥಾನ ಹಾಗೂ ಇತರೆ ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ. ಇಂತಹ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದ್ದು, ಅದರ ನಿರ್ವಹಣೆ ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ. ಜೊತೆಗೆ ದೇವಸ್ಥಾನ, ಧಾರ್ಮಿಕ ಸ್ಥಳಗಳಲ್ಲಿ ದಿನಕ್ಕೆ ಒಂದು ಬಾರಿ ಕಡ್ಡಾಯವಾಗಿ ಸ್ಯಾನಿಟೈಜೇಷನ್ ಮಾಡಬೇಕು. ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇವಲ 50 ಜನರಿಗೆ ಮಾತ್ರ ಅವಕಾಶವಿದೆ. ಕಡ್ಡಾಯವಾಗಿ ಆಯಾ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಆಯಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ ಹಾಗೂ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಮದುವೆ ಕಾರ್ಯಕ್ರಮದಲ್ಲಿ ಹಾಜರಿದ್ದವರ ವಿವರಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ಸಂಗ್ರಹಿಸಬೇಕು. ಒಂದುವೇಳೆ ಮದುವೆಯಲ್ಲಿ ಹಾಜರಿದ್ದವರು ಇದೇ ಜಿಲ್ಲೆಯವರಾಗಿದ್ದಲ್ಲಿ ಎರಡು ದಿನಗಳ ಒಳಗಾಗಿ ಅವರನ್ನು ಕೋವಿಡ್ ಪರೀಕ್ಷೆ ಒಳಪಡಿಸಬೇಕು ಎಂದರು.
Advertisement
ಕಾರವಾರ : ಹೊರಗಿನವರಿಗೆ ನೆಗಟಿವ್ ವರದಿ ಕಡ್ಡಾಯ
06:48 PM Aug 05, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.