Advertisement
ನಗರದ ದೇವಾಂಗ ಸಂಘದ ಆರ್. ವೀರಮಣಿ ಸಾಂಸ್ಕೃತಿಕ ಭವನದಲ್ಲಿ ನಗರದ ವಿವಿಧ ಸಂಘಟನೆಗಳ ಹಾಗೂ ಸಾಹಿತ್ಯಾಸಕ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ನ ಸದಸ್ಯರು ಕನ್ನಡದ ಸೇವೆ ಮಾಡುವ ಜವಾಬ್ದಾರಿ ವಹಿಸಿಕೊಟ್ಟಿದ್ದಾರೆ. ನಿರೀಕ್ಷೆ ಮೀರಿ ಬೆಂಬಲ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಕನ್ನಡ ಭವನ ಇಲ್ಲದ 6 ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ, ಉದಯೋನ್ಮುಖ ಲೇಖಕರ ಪುಸ್ತಕಗಳ ಪ್ರಕಟಣೆ, ಯುವ ಸಾಹಿತಿಗಳಿಗಾಗಿ ಕಥೆ ಹಾಗೂ ಕಾವ್ಯ ಕಮ್ಮಟ, ಕಾರ್ಯಾಗಾರ, ವಿಚಾರ ಸಂಕಿರಣ ಆಯೋಜಿಸಲಾಗುವುದು. ಬಾಗಲಕೋಟೆಯಲ್ಲಿ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜನೆ, ದತ್ತಿನಿಧಿ ಕಾರ್ಯಕ್ರಮ ಆಯೋಜಿಸಲಾಗುವುದು. ವಿದ್ಯಾರ್ಥಿಗಳು, ಜನಸಾಮಾನ್ಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಕಾರ್ಯಕ್ರಮ ಸಂಘಟಿಸುವುದಾಗಿ ಕಸಾಪ ಜಿಲ್ಲಾಧ್ಯಕ್ಷ ಶೆಲ್ಲಿಕೇರಿ ಹೇಳಿದರು.
Advertisement
ಕಸಾಪ ಚಟುವಟಿಕೆ ವಿಸ್ತರಿಸುವ ಗುರಿ
12:04 PM Nov 28, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.