Advertisement
ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪದ ಪರವಾಗಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾದೇವ ವೇಳಿಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಜಿ. ನಾಯಕ ಅವರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುನೀಲ ಹೆಗಡೆಯವರು ತುಳಸಿ ಗೌಡ, ಮಾದೇವ ವೇಳಿಪ ಅವರುಗಳನ್ನು ಸನ್ಮಾನಿಸಿದರು.
Related Articles
Advertisement
ಇದನ್ನೂ ಓದಿ:ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡದ ತೆರವಿಗೆ ಆಗ್ರಹ
ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆಯವರು ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಹಾಗೂ ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ಕನ್ನಡ ಭವನ ನಿರ್ಮಿಸಲು ಕಸಾಪ ಮಹತ್ವದ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಾಂಡೇಲಿಯ ಹಿರಿಯ ಲೇಖಕರಾದ ಡಾ. ಆರ್.ಜಿ. ಹೆಗಡೆಯವರ ‘ಮೊದಲ ಮಳೆಯ ಪರಿಮಳ’ ಹಾಗೂ ‘ಪ್ರಭುತ್ವದ ತಲ್ಲಣಗಳು’ ಎಂಬ ಕೃತಿಗಳು ಹಾಗೂ ಪ್ರವೀಣ ನಾಯಕ ಹಿಚ್ಕಡರವರ ‘ಅವ್ವನೆಂಬ ಹೊಂಗೆಯ ನೆರಳು’ ಎಂಬ ಸಂಪಾದಿತ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಬಿ.ಎನ್.ವಾಸರೆ ಸ್ವಾಗತಿಸಿ, ವಂದಿಸಿದರು. ಶಿಕ್ಷಕ ವಿಷ್ಣು ಪಟಗಾರ ಕಾರ್ಯಕ್ರಮ ನಿರೂಪಿಸಿದರು.