Advertisement

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

07:26 PM Jan 05, 2025 | Team Udayavani |

ಮಂಜೇಶ್ವರ: ಮೀಂಜ ಗ್ರಾಮ ಪಂಚಾಯತ್‌ನ ಮುರತ್ತಣೆ ಬಳಿಯ ಬಟ್ಟಿಪದವುನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಎ.ಫ್ರೇಮ್‌ ವರ್ಕ್ಸ್ ಎಂಬ ಪ್ಲೈವುಡ್‌ ಮಿಲ್ಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

Advertisement

ಪ್ಲೈವುಡ್‌ನ‌ ಹುಡಿ ಶೇಖರಣೆಯಾಗುವ ಘಟಕದಲ್ಲಿ ಡಸ್ಟ್‌ ಕಲೆಕ್ಟರ್‌ ಇದ್ದು, ಅಲ್ಲಿ ಬೆಂಕಿ ತಗುಲಿ ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಈ ಸಂದರ್ಭದಲ್ಲಿ ಕಾರ್ಮಿಕರಿದ್ದು, ಸ್ಥಳೀಯರ ಸಹಕಾರದಿಂದ ಬೆಂಕಿ ಆರಿಸಲು ಯತ್ನಿಸಿದರೂ ಸಾಧ್ಯವಾಗದ ಕಾರಣದಿಂದ ಉಪ್ಪಳದ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.

ಸ್ಥಳಕ್ಕೆ ಎರಡು ವಾಹನಗಳಲ್ಲಿ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸಿತು. ಸುಮಾರು 8 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಮಿಲ್ಲಿನ ಮಾಲಕ ಮಂಗಳೂರು ನಿವಾಸಿ ಎ.ಕೆ.ನಿಯಾಜ್‌ ತಿಳಿಸಿದ್ದಾರೆ.

ಎಂಡಿಎಂಎ ಸಹಿತ ಇಬ್ಬರ ಬಂಧನ
ಬದಿಯಡ್ಕ: ವಾಹನ ತಪಾಸಣೆ ಸಂದರ್ಭದಲ್ಲಿ ಬದಿಯಡ್ಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 83.890 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದು, ಈ ಸಂಬಂಧ ಕಾಸರಗೋಡು ಪೊಲೀಸ್‌ ಠಾಣೆ ವ್ಯಾಪ್ತಿಯ ಅಬ್ದುಲ್‌ ಸಲ್ಮಾನ್‌(29) ಮತ್ತು ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮುಹಮ್ಮದ್‌ ಸಲೀಲ್‌(41)ನನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next