ಕಾಸರಗೋಡು: ಪಿಣರಾಯಿ ವಿಜಯನ್ ನೇತೃತ್ವದ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಕೇಂದ್ರ ಸರಕಾರದ ಯೋಜನೆಯನ್ನು ಬುಡಮೇಲುಗೊಳಿಸಲು ಷಡ್ಯಂತ್ರ ನಡೆಸುತ್ತಿದೆಯೆಂದು ಆರೋಪಿಸಿ ಬಿಜೆಪಿ ಕಾಸರಗೋಡು ಮಂಡಲ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡ ಪಾದಯಾತ್ರೆಯನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಪಿ.ಪ್ರಕಾಶ್ ಬಾಬು ಅವರು ಮಂಡಲ ಅಧ್ಯಕ್ಷೆ ಪ್ರಮೀಳಾ ಮಜಲ್ ಅವರಿಗೆ ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು.
ಮೊಗ್ರಾಲ್ ಪುತ್ತೂರು ಪಂಚಾಯತ್ ನ ಪಂಜಿಗುಡ್ಡೆಯಿಂದ ಯಾತ್ರೆ ಆರಂಭಗೊಂಡಿತು. ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಕೆ.ಸವಿತಾ ಟೀಚರ್, ರಾಜ್ಯ ಕೌನ್ಸಿಲ್ ಸದಸ್ಯ ಕೆ.ಸತೀಶ್, ಜಿಲ್ಲಾ ಕಾರ್ಯದರ್ಶಿ ಉಮಾ ಕಡಪ್ಪುರ, ಯುವಮೋರ್ಚಾ ರಾಜ್ಯ ಮಹಿಳಾ ಕನ್ವೀನರ್ ಅಂಜು ಜೋಸ್ಟಿ, ಕೋಶಾಧಿಕಾರಿ ಮಹಾಬಲ ರೈ, ಎಸ್. ಸಿ.ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಸಂಪತ್ ಕುಮಾರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್, ಜಿಲ್ಲಾ ಕಾರ್ಯದರ್ಶಿ ಎನ್.ಮಧು, ಮೊಗ್ರಾಲ್ ಪುತ್ತೂರು ಪಂಚಾಯತ್ ಸಮಿತಿ ಅಧ್ಯಕ್ಷ ಚಂದ್ರಶೇಖರ, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿ ಸುಕುಮಾರ ಕುದ್ರೆಪ್ಪಾಡಿ ಸ್ವಾಗತಿಸಿದರು. ಗುರುಪ್ರಸಾದ್ ಪ್ರಭು ವಂದಿಸಿದರು. ಚೇರಂಗೈ ಕಡಪ್ಪುರದಲ್ಲಿ ಪಾದಯಾತ್ರೆ ಸಮಾಪ್ತಿಗೊಂಡಿತು.