ಕಾಸರಗೋಡು: ಮುಳಿಯಾರು ಪಂಚಾಯತ್ನ ಕೆಟ್ಟುಂಗಲ್ನಲ್ಲಿ ಅಬಕಾರಿ ಮತ್ತು ಆದೂರು ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಸ್ಫೋಟಕ ವಸ್ತು ಪತ್ತೆಹಚ್ಚಿ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಮುಳಿಯಾರು ಕೆಟ್ಟುಂಗಲ್ನ ಮೊಹಮ್ಮದ್ ಮುಸ್ತಫಾ (42)ನನ್ನು ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್ ನ್ಯಾಯಾಲಯ(2) ಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Advertisement
ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನೀಡಿರುವ ಹೇಳಿಕೆಗಳ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆಗೆ ತೀರ್ಮಾನಿಸಿದ್ದಾರೆ.