Advertisement
54 ಮಂದಿಗೆ ಸೋಂಕುರಾಜ್ಯದಲ್ಲಿ ರವಿವಾರ 54 ಮಂದಿಗೆ ಕೋವಿಡ್ ವೈರಸ್ ಸೋಂಕು ದೃಢಗೊಂಡಿದೆ. ಇವರಲ್ಲಿ 23 ಮಂದಿ ವಿದೇಶದಿಂದ ಬಂದವರು. 25 ಮಂದಿ ಇತರ ರಾಜ್ಯಗಳಿಂದ ಬಂದವರು. ಮೂವರು ಆರೋಗ್ಯ ಕಾರ್ಯಕರ್ತರಿಗೆ ರೋಗ ಬಾಧಿಸಿದೆ. ಇದೇ ವೇಳೆ 56 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಮಾಸ್ಕ್ ಧರಿಸದ 215 ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಲಾಕ್‌ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಜಿಲ್ಲೆಯಲ್ಲಿ ಏಳು ಕೇಸುಗಳನ್ನು ದಾಖಲಿಸಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ.