Advertisement

ಕಾನತ್ತೂರು: ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

01:49 PM Jan 09, 2021 | Team Udayavani |

ಕಾಸರಗೋಡು: ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾನತ್ತೂರು ವಡಕ್ಕೇಕರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

Advertisement

ಪತ್ನಿ ಬೇಬಿ (35) ಅವರನ್ನು ಗುಂಡಿಕ್ಕಿ ಕೊಂದ ಪತಿ ವಿಜಯನ್, ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ಖಾಸಗಿ ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಸಮಸ್ಯೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಮದ್ಯದ ಅಮಲಿನಲ್ಲಿ ವಿಜಯನ್ ಈ ಕೃತ್ಯ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ಬೆಂಕಿ ಅವಘಡ: ಹತ್ತು ನವಜಾತ ಶಿಶುಗಳ ದುರ್ಮರಣ!

ಅದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next