Advertisement

Kasaragod ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗಕ್ಕೆ ಯತ್ನ: ಸಚಿವ ಶಿವರಾಜ ತಂಗಡಗಿ

12:15 AM Jan 25, 2024 | Team Udayavani |

ಕಾಸರಗೋಡು: ಕನ್ನಡದ ಶಕ್ತಿಯಾಗಿರುವ ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿ ಗಳಿಗೆ ಕರ್ನಾಟಕದಲ್ಲಿ ಉದ್ಯೋಗ ಮೀಸಲಾತಿ ನೀಡುವ ಬಗ್ಗೆ ಚಿಂತಿಸಲಾಗುವುದು. ಈ ಮೂಲಕ ಕಾಸರಗೋಡಿನಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಸರ
ಕಾರದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವರಾಜ ಎಸ್‌. ತಂಗಡಗಿ ಭರವಸೆ ನೀಡಿದರು.

Advertisement

ಎಡನೀರು ಶಾಲಾ ಸಭಾಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಕೇರಳ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ತಿಂಗಳು 5ರಿಂದ ನಡೆ ಯುವ ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾವಿಸುವುದಾಗಿಯೂ ಸಿಎಂ ಅವರಲ್ಲಿ ಚರ್ಚಿಸುವುದಾಗಿಯೂ ತಿಳಿಸಿದರು.

ಹಲವು ಸಮಸ್ಯೆಗಳಿದ್ದರೂ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾಸರಗೋಡಿನ ಕನ್ನಡಿಗರ ಇಚ್ಛಾಶಕ್ತಿ ಶ್ಲಾಘನೀಯ. ಕನ್ನಡ ಭಾಷೆ, ಸಾಹಿತ್ಯ,ಕಲೆಯ ಬೆಳವಣಿಗೆ ಎಡನೀರು ಮಠದ ಕೊಡುಗೆ ಅನುಪಮ ಎಂದರು.

ಶಾಸಕ ಎನ್‌.ಎ. ನೆಲ್ಲಿಕುನ್ನು ಅಧ್ಯಕ್ಷತೆವಹಿಸಿದ್ದರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಆಶೀರ್ವಚನ ನೀಡಿದರು.ಶಾಸಕ ಸಿ.ಎಚ್‌. ಕುಂಞಂಬು, ಹಿರಿಯ ಸಾಹಿತಿ ಪ್ರೊ| ಎಸ್‌.ಜಿ. ಸಿದ್ಧರಾಮಯ್ಯ ಶುಭ ಹಾರೈಸಿದರು.

Advertisement

2022-23ನೇ ಸಾಲಿನ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸೆಸೆಲ್ಸಿಯನ್ನು ಕನ್ನಡ ಮಾಧ್ಯಮದಲ್ಲಿ ಅಭ್ಯಸಿಸಿ ಅತೀ ಹೆಚ್ಚು ಅಂಕ ಗಳಿಸಿದ ಕೇರಳದ 98 ವಿದ್ಯಾರ್ಥಿಗಳನ್ನು ನಗದು ಪ್ರಶಸ್ತಿ ನೀಡ ಸಮ್ಮಾನಿಸಲಾಯಿತು. ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 12 ಸಾವಿರ ರೂ., ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 11 ಸಾವಿರ ರೂ. ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next