ಕಾಸರಗೋಡು: ಅನುಮಾನಾಸ್ಪದವಾಗಿ 30 ಲಕ್ಷ ರೂಪಾಯಿ ನಗದು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಶರದ್ ದಾಬಾಡೆ (22) ಎಂಬಾತನನ್ನು ಅಗತ್ಯ ಪುರಾವೆಗಳು ಅಥವಾ ದಾಖಲೆಗಳಿಲ್ಲದೆ ಅಪಾರ ಪ್ರಮಾಣದ ಹಣವನ್ನು ಸಾಗಿಸಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ವಶಪಡಿಸಿಕೊಂಡ ನಗದು, ಹವಾಲಾ ಹಣ ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: “ತಂದೆಯ ಹತ್ಯೆಗೈದವರನ್ನು ಗಲ್ಲಿಗೇರಿಸುವವರೆಗೆ ಚಪ್ಪಲಿ ತೊಡುವುದಿಲ್ಲ’
ಆರೋಪಿಯು ಮಂಗಳೂರಿನಿಂದ ಕಾಸರಗೋಡು ಕಡೆಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದಾಗ ಮಂಜೇಶ್ವರ ಅಬಕಾರಿ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ನಗದನ್ನು ಬಟ್ಟೆಯಲ್ಲಿ ಕಟ್ಟಿರುವುದು ಪತ್ತೆಯಾಗಿದೆ. ಗಿರವಿ ಇಟ್ಟಿದ್ದ ಚಿನ್ನಾಭರಣಗಳನ್ನು ಅಡವಿಡಲು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಆರೋಪಿ ಹೇಳಿದ್ದಾನೆ.
ಈ ನಡುವೆ ದಬಾಡೆಯನ್ನು ಇದೀಗ ಮಂಜೇಶ್ವರದಲ್ಲಿ ಪೊಲೀಸರಿಗೆ ಒಪ್ಪಿಸಲಾಗಿದೆ. ವಶಪಡಿಸಿಕೊಂಡ ಹಣದ ಮೂಲವನ್ನು ಪತ್ತೆ ಮಾಡಲಾಗುತ್ತಿದೆ.