Advertisement

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

07:43 PM Jan 02, 2025 | Team Udayavani |

ಕಾಸರಗೋಡು: ಪೆರಿಯಾ ಕಲ್ಯೋಟ್‌ನ ಯುವ ಕಾಂಗ್ರೆಸ್‌ ಕಾರ್ಯಕರ್ತರಾದ ಕೃಪೇಶ್‌ (19) ಮತ್ತು ಶರತ್‌ಲಾಲ್‌ (24) ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ 14 ಮಂದಿ ತಪ್ಪಿತಸ್ಥರ ಶಿಕ್ಷೆ ಪ್ರಮಾಣವನ್ನು ಜ. 3ರಂದು ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಲಿದ್ದು, ಪೆರಿಯ ಮತ್ತು ಪರಿಸರದಲ್ಲಿ ಬಿಗು ಪೊಲೀಸ್‌ ಬಂದೋಬಸ್ತು ಕೈಗೊಳ್ಳಲಾಗಿದೆ.

Advertisement

ಬೇಕಲ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಶಾಂತಿ ಪಾಲನೆಗಾಗಿ ಜಿಲ್ಲಾಧಿಕಾರಿ ಇಂಬುಶೇಖರ್‌ ಸರ್ವಪಕ್ಷ ಸಭೆ ಕರೆದಿದ್ದರು. ಈ ಪ್ರಕರಣದಲ್ಲಿ 24 ಆರೋಪಿಗಳ ಪೈಕಿ 14 ಮಂದಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು. 10 ಮಂದಿಯನ್ನು ಖುಲಾಸೆಗೊಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next