Advertisement

Kasaragod ಗೋಡೆ ಕುಸಿದು ಬಿದ್ದು ಕಾರ್ಮಿಕರಿಬ್ಬರ ಸಾವು

11:22 PM Nov 21, 2023 | Team Udayavani |

ಕಾಸರಗೋಡು: ಪೈಪ್‌ಲೈನ್‌ಗಾಗಿ ನೆಲ ಅಗೆಯುತ್ತಿದ್ದಾಗ ಸಮೀಪದ ಗೋಡೆ ಕುಸಿದು ಬಿದ್ದು ಇಬ್ಬರು ಅನ್ಯರಾಜ್ಯ ಕಾರ್ಮಿಕರು ಸಾವಿಗೀಡಾದ ಘಟನೆ ನಗರದಲ್ಲಿ ಮಂಗಳವಾರ ಸಂಭವಿಸಿದೆ.

Advertisement

ಕರ್ನಾಟಕದ ಚಿಕ್ಕಮಗಳೂರು ಮೂಲದ ಬಾಸಯ್ಯ (40) ಮತ್ತು ಕೊಪ್ಪಳ ಮೂಲದ ಲಕ್ಷ್ಮಪ್ಪ (43) ಮೃತಪಟ್ಟವರು. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮಾರ್ಕೆಟ್‌ ರೋಡ್‌ನ‌ ಪರಿಸರದಲ್ಲಿ ಈ ಅವಘಡ ಸಂಭವಿಸಿದೆ.

ಕುಸಿತ ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸರ್ಕಲ್‌ ಇನ್‌ಸ್ಪೆಕ್ಟರ್‌ ಪಿ. ಅಜಿತ್‌ ಕುಮಾರ್‌ ನೇತೃತ್ವದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮೇಲೆತ್ತಿದರು.

 

Advertisement

Udayavani is now on Telegram. Click here to join our channel and stay updated with the latest news.

Next