Advertisement

Kasaragodu: ಕೇಂದ್ರ ವಿ.ವಿ. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

08:30 PM Apr 02, 2024 | Team Udayavani |

ಕಾಸರಗೋಡು: ಪೆರಿಯದಲ್ಲಿರುವ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಒಡಿಶಾ ಮೂಲದ ಹಿಂದಿ ಆ್ಯಂಡ್‌ ಕಂಪರೇಟಿವ್‌ ಲಿಟರೇಚರ್‌ ಪಿಎಚ್‌ಡಿ ವಿದ್ಯಾರ್ಥಿನಿ ರೂಬಿ ಪಟೇಲ್‌ (24) ಮೃತಪಟ್ಟಿರುವ ವಿದ್ಯಾರ್ಥಿನಿ.

ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹಾಸ್ಟೆಲ್‌ನ ಶೌಚಾಲಯದಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಒಂದು ತಿಂಗಳ ಹಿಂದೆ ಉತ್ತರ ಪ್ರದೇಶದ ಗಾಜಿಪುರ್‌ ನಿವಾಸಿಯಾದ ಎಂ.ಎಡ್‌. ದ್ವಿತೀಯ ಸೆಮಿಸ್ಟರ್‌ ವಿದ್ಯಾರ್ಥಿ ನಿಧಿಶ್‌ ಯಾದವ್‌ (28) ಅವರ ಮೃತದೇಹ ಹಾಸ್ಟೆಲ್‌ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next