Advertisement

ಕಾಸರಗೋಡು: 7 ಮಂದಿಗೆ ಸೋಂಕು ದೃಢ

06:08 AM May 23, 2020 | mahesh |

ಕಾಸರಗೋಡು: ಕೇರಳದಲ್ಲಿ ಶುಕ್ರವಾರ ಒಂದೇ ದಿನ 42 ಕೋವಿಡ್ ಪ್ರಕರಣಗಳು ದೃಢಗೊಂಡಿವೆ. ಕೇರಳಕ್ಕೆ ಇದು ಕೋವಿಡ್ ಇತಿಹಾಸದ ಕರಾಳ ಶುಕ್ರವಾರವಾಗಿದೆ. ಇದೇ ವೇಳೆ ಇಬ್ಬರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ 7 ಮಂದಿಗೆ ಸೋಂಕು ದೃಢಗೊಂಡಿದೆ. ಇದರೊಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 26 ಕ್ಕೇರಿತು. ಸೋಂಕಿತರ ಪೈಕಿ 21 ಮಂದಿ ಮಹಾರಾಷ್ಟ್ರದಿಂದ ಬಂದವರು. ತಮಿಳುನಾಡು ಹಾಗೂ ಆಂಧ್ರದಿಂದ ಬಂದ ತಲಾ ಒಬ್ಬರಿಗೆ ರೋಗ ಬಾಧಿಸಿದೆ. ವಿದೇಶದಿಂದ ಬಂದ 17 ಮಂದಿಗೆ ಸೋಂಕು ದೃಢಪಟ್ಟಿದೆ. ಕಣ್ಣೂರಿನಲ್ಲಿ ಒಬ್ಬರಿಗೆ ಸಂಪರ್ಕದಿಂದ ರೋಗ ಬಂದಿದ್ದು, ಕಲ್ಲಿಕೋಟೆಯಲ್ಲಿ ಓರ್ವ ಆರೋಗ್ಯ ಕಾರ್ಯಕರ್ತೆಗೆ ರೋಗ ಬಾಧಿಸಿದೆ.

Advertisement

7 ಮಂದಿಗೆ ಪಾಸಿಟಿವ್‌
ಜಿಲ್ಲೆಯಲ್ಲಿ ಶುಕ್ರವಾರ 7 ಮಂದಿಗೆ ಕೋವಿಡ್‌ ಪಾಸಿಟಿವ್‌ ಆಗಿದೆ. ಪುತ್ತಿಗೆ ನಿವಾಸಿಯಾಗಿರುವ 57 ವರ್ಷ ಪ್ರಾಯದ ವ್ಯಕ್ತಿ, ಮುಳಿಯಾರು ನಿವಾಸಿ 42 ವರ್ಷದ ವ್ಯಕ್ತಿ, ಕುಂಬಳೆ ನಿವಾಸಿಗಳಾದ 36, 38, 42, 56 ವರ್ಷ ಪ್ರಾಯದ ವ್ಯಕ್ತಿಗಳಿಗೆ ಸೋಂಕು ಖಚಿತಗೊಂಡಿದೆ. ಇನ್ನೊಬ್ಬರು ಕುಂಬಳೆ ನಿವಾಸಿ 42 ವರ್ಷದವರು. ಇವರೆಲ್ಲರೂ ಪುರುಷರು. ಪುತ್ತಿಗೆ ನಿವಾಸಿ ಮಹಾರಾಷ್ಟ್ರದಿಂದ ಆಗಮಿಸಿದ್ದಾರೆ. ಕುಂಬಳೆ ನಿವಾಸಿಗಳು ಒಂದೇ ವಾಹನದಲ್ಲಿ ಸಂಚರಿಸಿದ್ದು, ಆ ಮೂಲಕ ಸೋಂಕು ತಗುಲಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2,648 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 2,161 ಮಂದಿ, ಆಸ್ಪತ್ರೆಗಳಲ್ಲಿ 487 ಮಂದಿ ನಿಗಾದಲ್ಲಿದ್ದಾರೆ. ಶುಕ್ರವಾರ 60 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.

364 ಮಂದಿ ವಿರುದ್ಧ ಕೇಸು
ಮಾಸ್ಕ್ ಧರಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 364 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.

ಲಾಕ್‌ಡೌನ್‌ ಉಲ್ಲಂಘನೆ
ಲಾಕ್‌ಡೌನ್‌ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 5 ಪ್ರಕರಣಗಳನ್ನು ದಾಖಲಿಸಲಾಗಿದೆ. 6 ಮಂದಿಯನ್ನು ಬಂಧಿಸಲಾಗಿದ್ದು, 4 ವಾಹನಗಳನ್ನು ವಶಪಡಿಸಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 2,361 ಕೇಸು ದಾಖಲಿಸಲಾಗಿದೆ. 3,009 ಮಂದಿಯನ್ನು ಬಂಧಿಸಲಾಗಿದ್ದು, 955 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next