Advertisement
ಜಿಲ್ಲೆಯಲ್ಲಿ ಒಟ್ಟು 176 ಮಂದಿಗೆ ಸೋಂಕು ಬಾಧಿಸಿದ್ದು, 162 ಮಂದಿ ಗುಣಮುಖರಾಗಿ ದ್ದಾರೆ. ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಸರಗೋಡು ಸರಕಾರಿ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲ 89 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಜನರಲ್ ಆಸ್ಪತ್ರೆಯ ವೈದ್ಯರ ತಂಡ ಮತ್ತು ಸಿಬಂದಿ ಸಾಧನೆ ಮಾಡಿದ್ದಾರೆ.
ಕಣ್ಣೂರು ಜಿಲ್ಲೆಯ ಮೂವರಿಗೆ ಮತ್ತು ಕಾಸರಗೋಡು ಜಿಲ್ಲೆಯ ಒಬ್ಬರ ಸಹಿತ ಕೇರಳದಲ್ಲಿ ಮಂಗಳವಾರ ಒಟ್ಟು ನಾಲ್ವರಲ್ಲಿ ಸೋಂಕು ದೃಢಗೊಂಡಿದೆ. ಇದೇ ವೇಳೆ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯಲ್ಲಿ ತಲಾ ಇಬ್ಬರಂತೆ ನಾಲ್ವರು ಗುಣಮುಖರಾಗಿದ್ದಾರೆ. ರೋಗ ಬಾಧಿತರಲ್ಲಿ ಇಬ್ಬರು ವಿದೇಶದಿಂದ ಬಂದವರು ಮತ್ತು ಇಬ್ಬರಿಗೆ ಸೋಂಕಿತರೊಂದಿಗಿನ ಸಂಪರ್ಕದಿಂದ ರೋಗ ಬಾಧಿಸಿದೆ.