Advertisement
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಈವರೆಗೆ 167 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 83 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 84 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಗುಣಮುಖರಾದವರಲ್ಲಿ ಮೂವರು ಕಾಸರಗೋಡಿನ ಜನರಲ್ ಆಸ್ಪತ್ರೆಯಲ್ಲಿ, ಇನ್ನೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
Related Articles
ಲಾಕ್‌ಡೌನ್ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಾಗಿ 47 ಕೇಸ್‌ಗಳನ್ನು ದಾಖಲಿಸಲಾಗಿದೆ. 63 ಮಂದಿಯನ್ನು ಬಂಧಿಸಲಾಗಿದೆ. 21 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
Advertisement