ಲಕ್ನೋ : ಉತ್ತರಪ್ರದೇಶದ ಕಾಸ್‌ಗಂಜ್‌ನಲ್ಲಿ ಗಣರಾಜ್ಯದಿನದಂದು 22 ವರ್ಷದ ಯುವಕನೊಬ್ಬನ ಭೀಕರ ಹತ್ಯೆಯ ಬಳಿಕ ಕೋಮು ಹಿಂಸಾಚಾರ ಭುಗಿಲೆದ್ದಿದ್ದು, ವ್ಯಾಪಕ ಹಿಂಸಾಚಾರ ವರದಿಯಾಗಿದೆ.
ಮೆರವಣಿಗೆ ವೇಳೆ ಚಂದನ್‌ಗುಪ್ತಾ ಎಂಬ ಯುವಕನ ಎದೆಗೆ ಗುಂಡಿಕ್ಕಿ ಹತ್ಯೆಗೈಯಲಾಗಿದ್ದು ,ಆ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.
2 ಕೋಮಿನ ಗುಂಪು ಗಳು ಪರಸ್ಪರ ಕಲ್ಲು ತೂರಾಟ ನಡೆಸಿಕೊಂಡಿದ್ದು ಈ ವೇಳೆ ನೌಶಾದ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಸ್‌ಗಂಜ್‌ನಾದ್ಯಂತ ಕರ್ಫ್ಯೂ ಹೇರಲಾಗಿದ್ದು ,ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಂತಿ ಕಾಪಾಡಲು ಮನವಿ ಮಾಡಿದ್ದು, ಯಾರೇ ಆಗಲಿ ಹಿಂಸಾಚಾರದಲ್ಲಿ ಭಾಗಿಯಾದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಎಚ್ಚರ ನೀಡಿದ್ದಾರೆ.