ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ.25ರಂದು ಸಂಜೆ ರಾಷ್ಟ್ರೀಯ ಹೆದ್ದಾರಿ ಲಾಯಿಲ ಸಮೀಪದ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿ ಅವರ ಪುತ್ರ ಫೈಂಟರ್‌ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(21) ಮೃತಪಟ್ಟವರು.
ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ, ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದ ತರಕಾರಿ ಸಾಗಾಟದ ಖಾಲಿ ವಾಹನ ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟು ಸವಾರ ಗಂಭೀರ ಗಾಯಗೊಂಡಿದ್ದು ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾದರು.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾರಗಳ ಹಿಂದೆ ಇದೇ ಸ್ಥಳದ ಸ್ವಲ್ಪ ದೂರದಲ್ಲಿ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟಿದ್ದರು. ಇದೀಗ ಮತ್ತೊಂದು ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ. ಕಿರಿದಾದ ತಿರುವು ಮುರುವು ರಸ್ತೆಯಲ್ಲಿ ವಾಹನ ದಟ್ಟಣೆಯಿಂದಾಗಿ ಪದೇ ಪದೆ ಅಪಘಾತ ಸಂಭವಿಸುತ್ತಿದೆ.
Related Articles
ಮೃತ ಪುರುಷೋತ್ತಮರ ತಂದೆ ಈ ಹಿಂದೆಯೇ ಮೃತಪಟ್ಟಿದ್ದು, ತಾಯಿ, ಇಬ್ಬರು ಸಹೋದರಿಯರಿಯರಿ ದ್ದಾರೆ. ಬದುಕಿಗೆ ಆಧಾರವಾಗಿದ್ದ ಮಗನನ್ನು ಕುಟುಂಬ ಕಳೆದುಕೊಂಡಿದೆ.