Advertisement

Kashmir Elections:ಬಿಜೆಪಿ ಏಕಾಂಗಿ ಸ್ಪರ್ಧೆ, ಶೀಘ್ರ ಅಭ್ಯರ್ಥಿಗಳ ಪಟ್ಟಿ

01:48 AM Aug 24, 2024 | Team Udayavani |

ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಎಲ್ಲ 90 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ತೀರ್ಮಾನಿಸಿದೆ. ಈ ಬಗ್ಗೆ ಶುಕ್ರವಾರ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ನಿವಾಸದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Advertisement

ಸೆ.18ರಂದು ನಡೆಯಲಿರುವ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ. 25ರಂದು ನಡೆಯಲಿರುವ ಕೇಂದ್ರೀಯ ಚುನಾವಣೆ ಸಮಿತಿ (ಸಿಇಸಿ)ಯಲ್ಲಿ ಅಭ್ಯರ್ಥಿಗಳ ಪಟ್ಟಿ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಮತ್ತು ನ್ಯಾಶನಲ್‌ ಕಾಂಗ್ರೆಸ್‌ ಪಕ್ಷಗಳು ಮೈತ್ರಿ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ಮಹತ್ವ ಪಡೆದಿದೆ. ಮೂಲಗಳ ಪ್ರಕಾರ, ಕಣಿವೆ ಚುನಾವಣೆಯು ಬಿಜೆಪಿ ಪಾಲಿಗೆ ಹಲವು ಆಯಾಮಗಳಲ್ಲಿ ಪ್ರಮುಖವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next