Advertisement

Kashmir;ಕಥುವಾದಲ್ಲಿ ಎನ್‌ಕೌಂಟರ್‌: ಉಗ್ರನ ಹತ್ಯೆ

12:45 AM Sep 30, 2024 | Team Udayavani |

ಜಮ್ಮು: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ರವಿವಾರವೂ ಮುಂದುವರಿದಿದೆ. ಈ ಸಂದರ್ಭದಲ್ಲಿ ಉಗ್ರನೊಬ್ಬನ್ನು ಕೊಲ್ಲಲಾಗಿದೆ. ಗ್ರಾಮದಲ್ಲಿ ಇನ್ನೂ 3ರಿಂದ 4 ಉಗ್ರರು ಈ ಗ್ರಾಮದೊಳಗೆ ನುಸುಳಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿಯನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಪೊಲೀಸ್‌ ಸಿಬಂದಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next