Advertisement
“ಕಾಶ್ಮೀರ್ ಫ್ರೀಡಂ ಮಾರ್ಚ್’ ಎಂಬ ಹೆಸರಿನಲ್ಲಿ ಈ ಘಾತಕ ಕೃತ್ಯ ನಡೆಸಿದ್ದಾರೆ. ಜತೆಗೆ ಘರ್ಷಣೆಯೂ ನಡೆದಿದೆ. ಈ ಸಂದರ್ಭದಲ್ಲಿ ಹೈಕಮಿಷನ್ ಕಚೇರಿಯ ಗಾಜುಗಳು ಒಡೆದು ಹೋಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಹೀಗಾಗಿ, ಹೈಕಮಿಷನ್ ಕಚೇರಿಗೆ ಸ್ಕಾಟ್ಲೆಂಡ್‌ಯಾರ್ಡ್ ಪೊಲೀಸರು ಹೆಚ್ಚಿನ ಬಂದೋಬಸ್ತ್ ನೀಡಲು ಮುಂದಾಗಿದ್ದಾರೆ.
Related Articles
Advertisement
ಮತ್ತೂಂದೆಡೆ ಸೌರಾ ಎಂಬಲ್ಲಿ ಆ.6ರಂದು ಗಾಯಗೊಂಡಿದ್ದ ಯುವಕ ಬುಧವಾರ ಅಸುನೀಗಿದ್ದಾನೆ. ಪೆಲೆಟ್ ಗನ್ ಬಳಕೆಯಿಂದ ಯುವಕ ಗಾಯಗೊಂಡಿರಲಿಲ್ಲ ಎಂದು ಸೇನೆ ಹೇಳಿದೆ. ಈ ಘಟನೆಯ ಬಳಿಕ ಶ್ರೀನಗರದ ಕೆಲ ಭಾಗಗಳಲ್ಲಿ ಮತ್ತೆ ನಿಷೇಧ ಹೇರಲಾಗಿದೆ. ಇದೇ ವೇಳೆ ಆ.4ರಿಂದ ಕಾಶ್ಮೀರ ಕಣಿವೆಯಲ್ಲಿ ವಿಧಿಸಲಾಗಿರುವ ನಿರ್ಬಂಧ ಬುಧವಾರವೂ ಮುಂದುವರಿದಿದೆ. ಸರ್ಕಾರಿ ಅಧಿಕಾರಿಗಳ ಪ್ರಕಾರ ಎಲ್ಲವೂ ನಿಯಂತ್ರಣದಲ್ಲಿದ್ದರೂ, ಜನಜೀವನ ಅಸ್ತವ್ಯಸ್ತವಾಗಿದೆ ಎಂದು ವರದಿಗಳು ತಿಳಿಸಿವೆ. ಜತೆಗೆ ಸ್ಥಾನಮಾನ ಹಿಂಪಡೆದ ಬಳಿಕ ಎಲ್‌ಒಸಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರನ್ನು ಕಾಶ್ಮೀರಕ್ಕೆ ಕಳುಹಿಸಲು ಪಾಕಿಸ್ಥಾನ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆ.5ರ ನಂತರದ ಬೆಳವಣಿಗೆಯಲ್ಲಿ ಹೋರಾಟಗಾರರು ಸೇರಿದಂತೆ 140 ಮಂದಿಯನ್ನು ಬೇರೆಡೆ ಸ್ಥಳಾಂತರಿಸಿದೆ ಮತ್ತು 400ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದೆ.
ಲಷ್ಕರ್ ಉಗ್ರರ ಬಂಧನಕಾಶ್ಮೀರದಲ್ಲಿ ಲಷ್ಕರ್-ಎ-ತೊಯ್ಯಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಅವರು ಎಲ್‌ಒಸಿ ಮೂಲಕ ಒಳ ನುಸುಳಲು ಪ್ರಯತ್ನಿಸುತ್ತಿದ್ದರು ಎಂದು ಸೇನೆಯ 15ನೇ ಕಾಪ್ಸ್ ìನ ಲೆ|ಜ|ಕೆ.ಜೆ.ಎಸ್.ಧಿಲ್ಲೋನ್ ಹೇಳಿದ್ದಾರೆ. ಇದರ ಜತೆಗೆ ಇದುವರೆಗೆ ಐವರು ನಾಗರಿಕರು ಅಸುನೀಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪುಟಿನ್‌ಗೆ ಪ್ರಧಾನಿ ವಿವರಣೆ
ವ್ಲಾಡಿವೋಸ್ಟಾಕ್: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ನರೇಂದ್ರ ಮೋದಿ ವಿವರಿಸಿದ್ದಾರೆ. ಅಲ್ಲದೆ, ಈ ವಿಚಾರದಲ್ಲಿ ಪಾಕಿಸ್ಥಾನ ಸುಳ್ಳು ಹಾಗೂ ತಪ್ಪುದಾರಿಗೆಳೆಯುವ ಸಂದೇಶವನ್ನು ಸಾರುತ್ತಿದೆ. ಪುಟಿನ್ ಜೊತೆಗಿನ ಮಾತುಕತೆಯ ವೇಳೆ ಪ್ರಧಾನಿ ಮೋದಿಯೇ ಈ ವಿಚಾರವನ್ನು ಎತ್ತಿದರು. ಅಲ್ಲದೆ, ಇದರ ಹಿಂದಿನ ಕಾನೂನು ಹಾಗೂ ತಾಂತ್ರಿಕ ಕಾರಣಗಳನ್ನು ವಿವರಿಸಿದರು ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದಾರೆ. ಈ ವಿಷಯದಲ್ಲಿ ಭಾರತದ ಬೆಂಬಲಕ್ಕೆ ನಿಂತಿರುವುದಕ್ಕಾಗಿ ರಷ್ಯಾಗೆ ಧನ್ಯವಾದ ತಿಳಿಸಿದ್ದಾರೆ. ಇತ್ತೀಚೆಗೆ ಕಾಶ್ಮೀರ ವಿಷಯದಲ್ಲಿ ಪ್ರತಿಕ್ರಿಯಿಸಿದ ರಷ್ಯಾ, ಇದು ದ್ವಿಪಕ್ಷೀಯ ವಿಚಾರ ಎಂದು ಸ್ಪಷ್ಟನೆ ನೀಡಿತ್ತು.