Advertisement

Kashmir; ಉಗ್ರರ ವಿರುದ್ಧ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

12:40 AM Sep 14, 2024 | Team Udayavani |

ಶ್ರೀನಗರ: ಕಾಶ್ಮೀರ ಚುನಾವಣೆಗೂ ಮುನ್ನ ಸೇನೆ ನಡೆಸಿದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 3 ಉಗ್ರರು ಹತ್ಯೆಯಾಗಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಯೋಧರು ಕೂಡ ಹುತಾತ್ಮರಾಗಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. ಕಾಶ್ಮೀರದ ಕಥುವಾ ಮತ್ತು ಕಿಶ್ತ್ ವಾರ್‌ನಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ.

Advertisement

ಕಿಶ್ತ್ವಾರ್‌ನಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದ ಸಮಯದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಯೋಧರು ಗಾಯಗೊಂಡರು. ಅವರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದರು. ಓರ್ವ ಉಗ್ರ ಸಾವಿಗೀಡಾಗಿದ್ದಾನೆ. 3-4 ಮಂದಿ ಉಗ್ರರು ಅಡಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಕಥುವಾದಲ್ಲಿ ನಡೆದ ಇನ್ನೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರರನ್ನು ಎನ್‌ಕೌಂಟರ್‌ ಮಾಡಲಾಗಿದೆೆ.

Advertisement

Udayavani is now on Telegram. Click here to join our channel and stay updated with the latest news.

Next