Advertisement
ಮಾಳದ ಅಕ್ಷತ್ ಕುಮಾರ್ ಅವರು ಮಾಳ,ಹೆಬ್ರಿ,ನಾಡ್ಪಾಲು,ಶಿರ್ಲಾಲು, ಕೆರ್ವಾಶೆ ಸೇರಿದಂತೆ ಮತ್ತು ಸುತ್ತಮುತ್ತಲಿನ 10 ಗ್ರಾಮಗಳನ್ನು ವರದಿಯಿಂದ ಕೈ ಬಿಡುವಂತೆ ಒತ್ತಾಯಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿರುವ ಪ್ರಧಾನಿ ಕಚೇರಿ ಜಿಲ್ಲಾಡಳಿತಕ್ಕೆ ಗ್ರಾಮಗಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದೆ.
Related Articles
Advertisement
ಕಸ್ತೂರಿ ರಂಗನ್ ವರದಿಯಲ್ಲಿ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ತಪ್ಪಲಿನ 40 ಗ್ರಾಮಗಳು, ದಕ್ಷಿಣ ಕನ್ನಡ ಜಿಲ್ಲೆಯ 48 ಗ್ರಾಮಗಳನ್ನು ಸೇರ್ಪಡೆ ಮಾಡಲಾಗಿದ್ದು, ವರದಿ ಅನ್ವಯವಾದರೆ ಈ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ , ಮೂಲಭೂತ ಸೌಕರ್ಯ ಮತ್ತು ಸಣ್ಣ ಕೈಗಾರಿಕೆಗಳು ಮುಂದುವರಿಯಲು ಅಡ್ಡಿಯಾಗುತ್ತದೆ.