Advertisement
ಒಂದು ವರ್ಷದ ಬಾಲಕನಿಗೆ ಸಿವಿಯರ್ ಕಂಬೈನ್ಡ್ ಇಮ್ಮುನೊ ಡೆಫಿಸೈನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆ ಇರುವುದು ಪತ್ತೆಯಾಗಿದ್ದು, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಅಸ್ಥಿಮಜ್ಜೆ (ಬೋನ್ ಮಾರೋ ಟ್ರಾನ್ಸ್ ಪ್ಲಾಂಟೇಶನ್) ಕಸಿ ಮಾಡಲು ಕಳುಹಿಸಲಾಗಿತ್ತು. ಅಸ್ಥಿಮಜ್ಜೆ ಕಸಿ ಮಾಡುವುದೊಂದೆ ಆತನ ಕಾಯಿಲೆಯನ್ನು ಗುಣಪಡಿಸಬಲ್ಲ ಏಕೈಕ ಚಿಕಿತ್ಸೆಯಾಗಿತ್ತು.
Related Articles
Advertisement
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅರ್ಚನಾ ಎಂವಿ ಮಾತನಾಡಿ, ‘ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರೆಸಿವ್ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಿಗಳನ್ನು ತಪ್ಪಿಸಲು, ಟಿ ಸಿ ಆರ್ ಆಲ್ಫಾ ಬೀಟಾ ಡಿಪ್ಲೀಷನ್ ಎಂದು ಕರೆಯಲ್ಪಡುವ ಸ್ಟೆಮ್ ಸೆಲ್ ಗ್ರಾಫ್ಟ್ ಮ್ಯಾನಿಪ್ಯುಲೇಷನ್ ತಂತ್ರಜ್ಞಾನವನ್ನು ಬಳಸಲಾಯಿತು, ಇದು ಕಸಿ ಸಮಯದಲ್ಲಿ ಸಹಜವಾಗಿ ಪ್ರಕ್ರಿಯೆ ನಡೆಯಲು ಸಹಾಯ ಮಾಡುತ್ತದೆ ಮತ್ತು ಅಡ್ಡಪರಿಣಾಮಗಳನ್ನು ಕಡಿಮೆ ಮಾಡುತ್ತದೆ’ ಎಂದು ಹೇಳಿದರು.
ಈ ಮಗುವಿಗೆ ನಮ್ಮ ವಿಶೇಷ ಮೂಳೆ ಮಜ್ಜೆ ಘಟಕದಲ್ಲಿ ಮೂಳೆ ಮಜ್ಜೆಯ ಕಸಿ ಮಾಡಲಾಯಿತು ಮತ್ತು 6 ವಾರಗಳ ನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಯಶಸ್ವಿ ಅರ್ಧ-ಹೊಂದಾಣಿಕೆಯ ಟಿ ಸೆಲ್ ಡೆಪ್ಲೇಷನ್ ನೊಂದಿಗೆ ಮೂಳೆ ಮಜ್ಜೆ ಕಸಿ ನಡೆಸಿ, ಈಗ ಒಂದು ವರುಷವಾಗಿದ್ದು ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ , ಆರೋಗ್ಯಕರ ಜೀವನ ನಡೆಸುತ್ತಿದೆ.
ಇಮ್ಯುನೊಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಧೆಯಾದ ಡಾ.ಶಮೀ ಶಾಸ್ತ್ರಿ ನೇತೃತ್ವದ ರಕ್ತ ಕೇಂದ್ರದ ವೈದ್ಯರ ತಂಡವು ಈ ಅಪರೂಪದ ಕಸಿಗೆ ಸಹಕರಿಸಿದೆ. ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲೊಜಿ ವಿಭಾಗದ ಮುಖ್ಯಸ್ಥರಾದ ಡಾ.ವಾಸುದೇವ ಭಟ್ ಕೆ ಮಾಹಿತಿ ನೀಡಿ, “ರಾಜ್ಯದ ಈ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್-ಡಿಪ್ಲೀಟೆಡ್ ಹ್ಯಾಪ್ಲೋಡೆಂಟಿಕಲ್ ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟ್‌ಗೆ ಒಳಗಾದ ಮೊದಲ ಪ್ರಕರಣ ಇದು. ಈ ನವೀನ ತಂತ್ರಜ್ಞನದೊಂದಿಗೆ, ದೊಡ್ಡ ತೊಡಕುಗಳಿಲ್ಲದೆ ಸಂಪೂರ್ಣವಾಗಿ ಹೊಂದಾಣಿಕೆಯ ದಾನಿಯು ಇಲ್ಲದಿರುವಾಗ ಕೂಡ ನಾವು ಮೂಳೆ ಮಜ್ಜೆಯ ಕಸಿ ಮಾಡಬಹುದಾಗಿದೆ” ಎಂದರು .
ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಅವರು ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಜೀವ ಉಳಿಸುವ ನಿಟ್ಟಿನಲ್ಲಿ ಮಕ್ಕಳ ರಕ್ತ ಶಾಸ್ತ್ರ ಆಂಕೊಲಾಜಿ ವಿಭಾಗದ ವೈದ್ಯರ, ರಕ್ತನಿಧಿ ವೈದ್ಯರ ಮತ್ತು ಶುಶ್ರೂಷಾ ಸೇವೆಗಳ ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.