Advertisement

ಕಸ್ತೂರಿ ರಂಗನ್‌ ವರದಿ ವಿರೋಧಿಸಿ ನಾಡಿದ್ದು ಪಾದಯಾತ್ರೆ

11:28 AM Aug 11, 2018 | Team Udayavani |

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಬಗರ್‌ಹುಕುಂ ರೈತರ ರಕ್ಷಣೆಗಾಗಿ ಹಾಗೂ ಕಸ್ತೂರಿ ರಂಗನ್‌ ವರದಿ ಜಾರಿ ವಿರೋ ಧಿಸಿ ಆ.13ರಂದು ಶಾಂತವೇರಿಯಿಂದ ತೀರ್ಥಹಳ್ಳಿ ತಾಲೂಕು ಕಚೇರಿವರೆಗೆ ಬೃಹತ್‌ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಮುಖಂಡ ಆರ್‌.ಎಂ. ಮಂಜುನಾಥ ಗೌಡ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9ಕ್ಕೆ ಶಾಂತವೇರಿ ಗೋಪಾಲಗೌಡರ ಜನ್ಮಸ್ಥಳದಿಂದ ಪಾದಯಾತ್ರೆ ಪ್ರಾರಂಭಗೊಂಡು ತೀರ್ಥಹಳ್ಳಿಯಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ, ಯುವ ಜೆಡಿಎಸ್‌ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ, ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್‌ ಹಾಗೂ ಜಿಲ್ಲೆಯ ಪಕ್ಷದ ಎಲ್ಲ ಘಟಕಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next