ಕಟಪಾಡಿ : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಒಂದು ಕಾರು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ವೇಳೆ ಅದೇ ದಿಕ್ಕಿಗೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಒಂದು ಕಾರು ಹೆದ್ದಾರಿ ಮದ್ಯದಲ್ಲಿ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಕಟಪಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ತೈಲ ಬೆಲೆ ಸತತ ಏರಿಕೆ: ಬೆಂಗಳೂರು ಸೇರಿ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?