Advertisement

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

11:28 PM Oct 02, 2024 | Team Udayavani |

ಕಾಪು: ಮೂಡುಬೆಳ್ಳೆ ನಿವಾಸಿ ಜಾನ್ಸನ್‌ ರೋಡ್ರಿಗಸ್‌ ಅವರು ರಸ್ತೆ ದಾಟುವ ವೇಳೆ ಆಯತಪ್ಪಿ ಹಠಾತ್ತನೆ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಕಟಪಾಡಿಯಲ್ಲಿ ನಡೆದಿದೆ.

Advertisement

ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಅ. 1ರಂದು ಕುಡಿತದ ಅಮಲಿನಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಉಪಚರಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಜಾನ್ಸನ್‌ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next