Advertisement
ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು. ಇವರ ಪತಿ ಉದ್ಯಾವರ ಗ್ರಾ.ಪಂ. ಹಾಲಿ ಸದಸ್ಯ ಲಾರೆನ್ಸ್ ಡೇಸ (62)ಅವರು ಅಸೌಖ್ಯದಿಂದ ನ.29ರಂದು ನಿಧನ ಹೊಂದಿದರು.
Related Articles
Advertisement
ಸಂತಾಪ:ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ (ಉ) ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಮುಖಂಡ ಉದ್ಯಾವರ ನಾಗೇಶ್ ಕುಮಾರ್, ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಧರ್ಮಗುರು ವಂ|ಅನಿಲ್ ಡಿಸೋಜ, ಸಹಾಯಕ ಧರ್ಮಗುರು ವಂ| ಸ್ಟೀಫನ್ ರಾಡ್ರಿಗಸ್, ಉಡುಪಿ ನಗರ ಪ್ರಾಧಿಕಾರದ ಸದಸ್ಯ ಗಿರೀಶ್ ಕುಮಾರ್ ಉದ್ಯಾವರ, ಭೂನ್ಯಾಯ ಮಂಡಳಿ ಸದಸ್ಯ ರೋಯ್ಸ ಉದ್ಯಾವರ, ಸಂತಾಪ ವ್ಯಕ್ತಪಡಿಸಿದ್ದಾರೆ.