Advertisement
ಜೋಡು ಪೆಜತ್ತಕಟ್ಟೆಯ ಬಳಿ ಕಾಂಕ್ರೀಟ್ ರಸ್ತೆ ಹೊಸದಾಗಿ ನಿರ್ಮಾಣಗೊಂಡಿದ್ದು,ಅದರ ಬಳಿ ಚರಂಡಿ ಸಮರ್ಪಕವಿಲ್ಲದೆ ಮಳೆ ನೀರು ಡಾಮಾರು ರಸ್ತೆಯಲ್ಲಿಯೇ ಹರಿದು ಡೊಡ್ಡ ಗುಂಡಿಗಳಾಗಿವೆ. ರಾತ್ರಿವೇಳೆ ಮಳೆ ಬಂದಾಗ ದ್ವಿಚಕ್ರ ವಾಹನ ಸವಾರರಿಗೆ ಗುಂಡಿಯ ಅರಿವಾಗದೆ ಅಪಘಾತ ಸಂಭವಿಸುತ್ತಿರುತ್ತದೆ. ಮುಖ್ಯರಸ್ತೆ ಯಾಗಿರುವುದರಿಂದ ವೇಗವಾಗಿ ಚಲಿಸುವ ವಾಹನ ಸವಾರರು ರಸ್ತೆಗುಂಡಿಗಳಿಂದಾಗಿ ನಿಯಂತ್ರಣ ತಪ್ಪಿ ಬೀಳುವ ಸಾಧ್ಯತೆ ಹೆಚ್ಚಿದೆ. ಘನ ವಾಹನಗಳು ಎದುರಾದಾಗ ಗುಂಡಿ ತಪ್ಪಿಸುವ ಭರದಲ್ಲಿ ಹೆಚ್ಚಿನ ಅಪಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Related Articles
Advertisement
ದಿನವೊಂದಕ್ಕೆ ರಸ್ತೆಯಲ್ಲಿ ಸಾವಿರಾರು ವಾಹನಗಳು,ವಿದ್ಯಾರ್ಥಿಗಳು ಸಂಚರಿಸುತ್ತಿದ್ದು ,ರಸ್ತೆಗುಂಡಿಗಳಿಂದ ವಾಹನ ಸವಾರರಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ಹೆಚ್ಚಿನ ಅವಘಡ ಸಂಭವಿಸುವ ಮುನ್ನ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಗೊಂಡು ವಾಹನ ನಿಬಿಡತೆಯಿಂದ ಕೂಡಿರುವ ಈ ಪ್ರದೇಶದ ರಾಜ್ಯ ಹೆದ್ದಾರಿಯ ಬಗ್ಗೆ ಗಮನ ಹರಿಸಿ ರಸ್ತೆಯನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂಬುದು ನಾಗರಿಕರ ಆಗ್ರಹಿಸುತ್ತಿದ್ದಾರೆ.
ಅಪಾಯಕಾರಿ ಹೊಂಡಗಳು:
ಮಳೆ ನೀರು ಸರಿಯಾಗಿ ಹರಿದು ಹೋಗದೆ ರಸ್ತೆಯಲ್ಲಿಯೇ ಹರಿಯುತ್ತಿದ್ದು ಗುಂಡಿಗಳಾಗಿದೆ. ಮಳೆ ಬರುವಾಗ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು ತಪ್ಪಿಸುವ ಭರದಲ್ಲಿ ಆಯತಪ್ಪಿ ದ್ವಿಚಕ್ರವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ರಸ್ತೆ ಸರಿಪಡಿಸಬೇಕಾಗಿದೆ. –ಗಿರಿಧರ ಪ್ರಭು, ವಾಹನ ಸವಾರ.
-ಸತೀಶ್ಚಂದ್ರ ಶೆಟ್ಟಿ, ಶಿರ್ವ