Advertisement
ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು.
Related Articles
Advertisement
ಶಿವಮೊಗ್ಗದಲ್ಲಿ ಗಲಾಟೆ ಮಾಡಿಸುವುದು ಈಶ್ವರಪ್ಪನವರು. ಜನರನ್ನು ಎತ್ತಿಕಟ್ಟಿ ಜಗಳ ಮಾಡುವಂತೆ ಮಾಡುವುದು ಅವರೆ. ಹರ್ಷ ಕೊಲೆಯಾದಾಗ ಆತನ ಹೆಣ ಇಟ್ಟುಕೊಂಡು ಮೆರವಣಿಗೆ ಮಾಡಿದರು, ಆಗ 144 ಸೆಕ್ಷನ್ ಇತ್ತು. ಸರ್ಕಾರವೂ ಇವರದೇ ಇದೆ ಆದರೂ ಒಬ್ಬ ಮಂತ್ರಿಯಾಗಿ ಈ ರೀತಿ ಮೆರವಣಿಗೆ ಮಾಡಿದರು. ಇತಿಹಾಸದಲ್ಲಿ ಎಲ್ಲೂ ಹೀಗೆ ನಡೆದಿಲ್ಲ. ಈಶ್ವರಪ್ಪ ಅವರಂತವರಿಂದಲೇ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಆಗುವುದಿಲ್ಲ ಎಂದರು.
ಶ್ರೀರಾಮುಲು ಅವರು ನಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನ್ಯಾ. ನಾಗಮೋಹನ್ ದಾಸ್ ಅವರ ವರದಿ ಜಾರಿ ಮಾಡುತ್ತೇವೆ, ಇದನ್ನು ರಕ್ತದಲ್ಲಿ ಬರೆದುಕೊಡ್ತೀನಿ ಎಂದು ಹೇಳಿದ್ದರು. ಅಧಿಕಾರಕ್ಕೆ ಬಂದು 24 ಗಂಟೆಯೊಳಗೆ ವರದಿ ಜಾರಿ ಮಾಡಿದರಾ? ಶ್ರೀರಾಮುಲು ಸಚಿವರಾಗಿರಲಿಲ್ವಾ? ನಾನು ರಾಮುಲು ಅವರನ್ನು ಪೆದ್ದ ಎನ್ನಲು ಕಾರಣ ಅವರೇ ಒಮ್ಮೆ ತಮ್ಮನ್ನು ತಾವು ಪೆದ್ದ ಎಂದು ಕರೆದುಕೊಂಡಿದ್ದರು. ಕೆಲವು ದಿನಗಳ ಹಿಂದೆ ಅವರು ಮಾತನಾಡುವಾಗ “ನಾನು ಉದ್ದವಿದ್ದೇನೆ ಆದರೂ ಪೆದ್ದ, ಆದರೆ ಬಸವರಾಜ ಬೊಮ್ಮಾಯಿ ಕುಳ್ಳ ಇದ್ದರೂ ಬುದ್ದಿವಂತ’ ಎಂದು ಹೇಳಿದ್ದರು. ಅವರ ಮಾತನ್ನೇ ನಾನು ನೆನಪು ಮಾಡಿದ್ದು ಅಷ್ಟೆ. ಸಮ್ಮಿಶ್ರ ಸರ್ಕಾರ ಇದ್ದಾಗ, ನಮ್ಮ ಪಕ್ಷದ ಪ್ರಿಯಾಂಕ್ ಖರ್ಗೆ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು ಆಗ ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಆಗಿದ್ದು.ಈ ಸಮಿತಿ ವರದಿ ನೀಡಿದ್ದು ಎಂದು ಹೇಳಿದರು.