Advertisement

Kateel Mela: ರಾತ್ರಿ ಇಡೀ ಯಕ್ಷಗಾನ ಪ್ರದರ್ಶನ

11:40 PM Jan 08, 2024 | Team Udayavani |

ಕಟೀಲು/ಮಂಗಳೂರು: ಕಾಲಮಿತಿ ಪದ್ಧತಿಯಲ್ಲಿ ನಡೆಯುತ್ತಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ. 14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ.

Advertisement

ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ. ಉಚ್ಚ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ ಅಪೇಕ್ಷೆ ಮೇರೆಗೆ ಜ. 14ರ ಮಕರ ಸಂಕ್ರಮಣದಿಂದ ಬೆಳಗ್ಗಿನವರೆಗೆ ಯಕ್ಷಗಾನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಆನುವಂಶಿಕ ಮುಕ್ತೇಸರ ಕೊಡೆತ್ತೂರುಗುತ್ತು ಸನತ್‌ ಕುಮಾರ್‌ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.

ಬೆಂಗಳೂರಿನ ಕೃಷ್ಣಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌, ಪೂರ್ಣರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ತೊಂದರೆ ಇಲ್ಲ, ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದಿತ್ತು. ಶಬ್ದಮಾಲಿನ್ಯ ಉಂಟಾಗಲಾರದು, ಧ್ವನಿವರ್ಧಕ ಬಳಕೆಯಿಂದ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ,ನಗರದಲ್ಲಿ ಅದರ ಶಬ್ದಮಿತಿಯನ್ನು ನೋಡಿಕೊಳ್ಳಲಾಗುವುದು, ಇದು ಹರಕೆಯ ಆಟವಾದ್ದರಿಂದ ಜನರಿಗೆ ಯಾವುದೇ ಸಮಸ್ಯೆಯೂ ಆಗಲಾರದು ಎಂದು ಸನತ್‌ಕುಮಾರ್‌ ಶೆಟ್ಟಿ “ಉದಯವಾಣಿ’ಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next