ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನವದೆಹಲಿಯ ಸಂಸತ್ ಭವನದಲ್ಲಿ ಉಭಯ ನಾಯಕರು ಪ್ರಧಾನಿ ಅವರನ್ನು ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.
” ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಭೇಟಿಯಾಗಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಮಾಹಿತಿಯನ್ನು ನೀಡಿ ಮೀನುಗಾರ ಸಮಾಜ ಬಾಂಧವರ ಆದರಣೀಯ ಮತ್ಸ್ಯ ದೇವತೆಯ ಸ್ಮರಣಿಕೆಯನ್ನು ಕರಾವಳಿಯ ಜನತೆಯ ಪರವಾಗಿ ನೀಡಲಾಯಿತು.” ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ದತೆಗಳು ನಡೆಯುತ್ತಿರುವ ವೇಳೆಯಲ್ಲಿ ಈ ಭೇಟಿ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.