Advertisement
ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೊಕ್ತೇಸರ ವಾಸು ದೇವ ಆಸ್ರಣ್ಣ, ಅರ್ಚಕ ಹರಿನಾರಾಯಣದಾಸ ಆಸ್ರಣ್ಣ , ಸುಧೀರ್ ಶೆಟ್ಟಿ ಕೊಡೆತ್ತೂರು ಗುತ್ತು, ಭೋಜನ ಶಾಲೆಯ ವ್ಯವಸ್ಥಾಪಕ ರಘುನಾಥ ಶೆಟ್ಟಿ, ಯೋಗೀಶ್, ಸುರೇಶ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ಗಣೇಶ್ ದೇವಾಡಿಗ ಉಪಸ್ಥಿತರಿದ್ದರು.
ದೇವಸ್ಥಾನದಲ್ಲಿ ಅನ್ನಪ್ರಸಾದ ಹಾಗೂ ಶ್ರೀ ದೇವರ ಶೇಷ ವಸ್ತ್ರ ಪಡೆಯಲು ಮಹಿಳೆಯರು ಮಧ್ಯಾಹ್ನದಿಂದಲೇ ಕಾಯುತ್ತಿದ್ದರು. ಬಸ್ ನಿಲ್ದಾಣ, ಕುದುರು ಪ್ರದೇಶ ಹಾಗೂ ಸೇತುವೆಯ ಮೇಲೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ದೇವಿಯ ದರ್ಶನ ಹಾಗೂ ಅನ್ನಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದದ 300 ಮಂದಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು. ಭದ್ರತಾ ವ್ಯವಸ್ಥೆಗೆ 100 ಪೊಲೀಸರನ್ನು ನಿಯೋಜಿಸಲಾಗಿತ್ತು. 30,000ಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.