Advertisement

ಕಟೀಲು: ತಿರುಗಾಟ ಆರಂಭ

09:56 AM Nov 14, 2017 | |

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಯಕ್ಷಗಾನ ಮೇಳಗಳ 2017-18ನೇ ಸಾಲಿನ ಸೇವೆ ಬಯಲಾಟಗಳ ತಿರುಗಾಟದ ಆರಂಭ ಸೋಮವಾರ ನಡೆಯಿತು.

Advertisement

ಪ್ರಥಮ ಸೇವೆಯಾಟದ ಪ್ರಯುಕ್ತ ದೇವಸ್ಥಾನದಲ್ಲಿ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಆರು ಮೇಳಗಳ ಕಲಾವಿದರಿಗೆ ಗೆಜ್ಜೆ ನೀಡುವ ಮೂಲಕ ಮೇಳಗಳ ತಿರುಗಾಟಕ್ಕೆ ಚಾಲನೆ ನೀಡಿದರು. ಆರು ಮೇಳಗಳ ದೇವರ ಪೆಟ್ಟಿಗೆ, ಚಿನ್ನ, ಬೆಳ್ಳಿಯ ಕಿರೀಟ ಹಾಗೂ ಆಯುಧಗಳನ್ನು ದೇವಸ್ಥಾನದಲ್ಲಿ ಪೂಜಿಸಿ ಬಳಿಕ ಶಾಲೆಯ ಸರಸ್ವತೀ ಸದನದಲ್ಲಿನ ಚೌಕಿಯಲ್ಲಿ ಪೂಜಿಸಲಾಯಿತು. ದೇಗುಲದ ರಥಬೀದಿಯಲ್ಲಿ ನಿರ್ಮಿಸಿದ ಆರು ರಂಗಸ್ಥಳಗಳಲ್ಲಿ ಬಯಲಾಟ ನಡೆಯಿತು.

ಕಟೀಲು ದೇವಸ್ಥಾನದ ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರುಗುತ್ತು, ಕಟೀಲು ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್‌ ಶೆಟ್ಟಿ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ವೇದವ್ಯಾಸ ತಂತ್ರಿ, ಶಾಸಕ ಅಭಯಚಂದ್ರ ಜೈನ್‌, ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಧರ್ಮ ಬೋಧಿನಿ ಟ್ರಸ್ಟ್‌ನ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಬಜಪೆ ರವಿರಾಜ ಆಚಾರ್ಯ, ದೇಗುಲದ ಪ್ರಬಂಧಕ ತಾರಾನಾಥ ಶೆಟ್ಟಿ, ಮುಂಬಯಿಯ ಉದ್ಯಮಿ ಐಕಳ ಹರೀಶ್‌ ಶೆಟ್ಟಿ, ವಿಶ್ವನಾಥ ಶೆಟ್ಟಿ ಐಕಳ, ಐಕಳ ಗಣೇಶ್‌ ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಅತ್ತೂರು ಬೈಲು ವೆಂಕಟರಾಜ ಉಡುಪ, ಕೊಡೆತ್ತೂರು ಗುತ್ತು ಸುಧೀರ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next