Advertisement

Kateel: ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ: ಕಲಾವಿದರು ಅಭಿನಂದನೀಯರು: ಪೇಜಾವರ ಶ್ರೀ

11:03 PM Nov 19, 2023 | Team Udayavani |

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದಲ್ಲಿ ನ. 18ರಂದು ಜರಗಿದ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಕ್ಷಶಾಲ್ಮಲಾ ಸಂಸ್ಥೆಗೆ ಮತ್ತು 22 ಮಂದಿ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Advertisement

ಸಂಸ್ಕಾರ ನೀಡುವ, ಸಂಸ್ಕೃತಿ ಉಳಿಸುವ, ಯಕ್ಷಗಾನದ ಕಲಾವಿದರ ತ್ಯಾಗ, ಶ್ರಮ ಸದಾ ಅಭಿನಂದನೀಯ. ಅಂತಹ ಕಲಾವಿದರನ್ನು ಗೌರವಿ ಸುವುದು ಸ್ತುತ್ಯರ್ಹ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.

21 ಕಲಾವಿದರಿಗೆ ಸಮ್ಮಾನ
ಕಲಾವಿದರಾದ ಚಿದಂಬರ ಬಾಬು ,ಕೋಟ ಗೋವಿಂದ ಉರಾಳ, ಮುಂಡ್ಕೂರು ವಸಂತ ಶೆಟ್ಟಿ, ತೀರ್ಥಹಳ್ಳಿ ಶಿವಶಂಕರ ಭಟ್‌, ಸಿದ್ದಾಪುರ ಸಂಜೀವ ಕೊಠಾರಿ, ಸೀತೂರು ಅನಂತಪದ್ಮನಾಭ ರಾವ್‌, ಕವ್ವಾಳೆ ಗಣಪತಿ ರಾಮಚಂದ್ರ ಭಾಗÌತ, ಮಂದಾರ್ತಿ ರಘುರಾಮ ಮಡಿವಾಳ, ಕೋಡಿ ವಿಶ್ವನಾಥ ಗಾಣಿಗ, ಸಿದ್ದಾಪುರ ಅಶೋಕ್‌ ಭಟ್‌, ಗುಣವಂತೆ ಸುಬ್ರಾಯ ನಾರಾಯಣ ಭಂಡಾರಿ, ಚೋರಾಡಿ ವಿಠಲ ಕುಲಾಲ್‌, ಎರ್ಮಾಳು ವಾಸುದೇವ ರಾವ್‌, ಈಚಲಕೊಪ್ಪ ಪ್ರಭಾಕರ ಹೆಗಡೆ, ಮಧೂರು ರಾಧಾಕೃಷ್ಣ ನಾವಡ, ಪಡುಬಿದ್ರೆ ರತ್ನಾಕರ ಆಚಾರ್ಯ, ಗುಂಡಿಮಜಲು ಗೋಪಾಲ ಭಟ್‌, ಇಡುವಾಣಿ ರ್ತ್ಯಂಬಕ ಹೆಗಡೆ, ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್‌, ಕಾಯರ್ತಡ್ಕ ವಸಂತ ಗೌಡ, ಶ್ರೀಧರ ಪಂಜಾಜೆ ಅವರನ್ನು ತಲಾ 20 ಸಾವಿರ ರೂ. ನಗದು ನೀಡಿ ಸಂಮಾನಿಸಲಾಯಿತು.

ಶ್ರೀ ಸ್ವರ್ಣವಲ್ಲೀ ಮಠದ ಕೃಪಾ ಶ್ರಯದ ಯಕ್ಷಶಾಲ್ಮಲಾ ಸಂಸ್ಥೆಗೆ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ 50 ಸಾವಿರ ರೂ. ನೀಡಿ ಗೌರವಿಸಲಾಯಿತು. ಮುದ್ರಾಡಿ ವಿಜಯಕುಮಾರ್‌ ಅವರಿಗೆ
“ಯಕ್ಷ ಚೇತನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇತ್ತೀಚೆಗೆ ನಿಧನರಾದ ಸಿಗಂಧೂರು ಮೇಳದ ಭಾಗವತ ರಾಮಚಂದ್ರ ಜಿ. ನಾಯ್ಕ… ಅವರ ಪತ್ನಿ ಗೀತಾ ಆರ್‌. ನಾಯ್ಕ… ಅವರಿಗೆ 50 ಸಾವಿರ ರೂ. ಸಾಂತ್ವನ ನಿಧಿ ನೀಡಲಾಯಿತು.ಕಟೀಲು ದೇಗುಲದ ಅನುವಂಶಿಕ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ. ಕಮಲಾದೇವಿ ಪ್ರಸಾದ ಆಸ್ರಣ್ಣ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಹಾಗೂ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ಅವ ರನ್ನು ಗೌರವಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್‌, ಪ್ರಭಾಕರ ಸುವರ್ಣ, ಲೀಲಾಕ್ಷ ಬಿ. ಕರ್ಕೇರ, ಎಂ. ಕೆ. ಭಟ್‌ ಕಡತೋಕ, ಕೆ. ಸದಾಶಿವ ಭಟ್‌, ಉಪಾಧ್ಯಕ್ಷ ಪಿ.ಕಿಶನ್‌ ಹೆಗ್ಡೆ, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು.

Advertisement

ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್‌ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next