Advertisement

ಕಟೀಲು ಮೇಳಗಳಿಂದಲೂ ಇನ್ನು ಕಾಲಮಿತಿ ಯಕ್ಷಗಾನ : ಆಡಳಿತ ಮಂಡಳಿ ನಿರ್ಣಯ

10:13 AM Aug 24, 2022 | Team Udayavani |

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ನಡೆಸಲ್ಪಡುವ ಆರೂ ಮೇಳಗಳ ಯಕ್ಷಗಾನ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.

Advertisement

ರಾತ್ರಿ 10.30ರಿಂದ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕವನ್ನು ಬಳಸ ಬಾರದು ಎಂದು ಸರಕಾರದಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ್ಯವಾಗಿದೆ.

ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ಒಪ್ಪಿಗೆ ಬಂದಿದೆ. ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯಿಸಲಾಗಿದೆ. ಪ್ರದರ್ಶನದ ಸ್ವರೂಪ ಚಿಂತನೆಗಳ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನುವಂಶಿಕ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್‌ ಕುಮಾರ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕರಾದ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.

ಇದನ್ನೂ ಓದಿ : ಮಂಗಳೂರಿಗೆ ಪ್ರಧಾನಿ ಭೇಟಿ : ಇನ್ನೆರಡು ದಿನಗಳಲ್ಲಿ ಕಾರ್ಯಕ್ರಮದ ರೂಪರೇಖೆ ಅಂತಿಮ

Advertisement

Udayavani is now on Telegram. Click here to join our channel and stay updated with the latest news.

Next