Advertisement

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟಿಗರಾದ ನತಾಲಿಯಾ -ಕ್ಯಾಥರಿನ್ ಬ್ರಂಟ್

10:11 AM May 31, 2022 | Team Udayavani |

ಲಂಡನ್: ಇಂಗ್ಲೆಂಡ್ ಮಹಿಳಾ ರಾಷ್ಟ್ರೀಯ ತಂಡದ ಕ್ರಿಕೆಟಿಗರಾದ ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

Advertisement

ನಾಯಕಿ ಹೀದರ್ ನೈಟ್, ಡ್ಯಾನಿ ವ್ಯಾಟ್, ಇಶಾ ಗುಹಾ, ಜೆನ್ನಿ ಗನ್ ಸೇರಿದಂತೆ ಇಂಗ್ಲೆಂಡ್ ತಂಡದ ಪ್ರಸ್ತುತ ಮತ್ತು ಹಿಂದಿನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್ ಅವರು 2017 ಮತ್ತು 2022ರ ಏಕದಿನ ವಿಶ್ವಕಪ್ ತಂಡದಲ್ಲಿ ಆಡಿದ್ದರು.

ಅಕ್ಟೋಬರ್ 2019 ರಲ್ಲಿ ಬ್ರಂಟ್ ಜೊತೆಗಿನ ನಿಶ್ಚಿತಾರ್ಥವನ್ನು ಸೀವರ್ ಘೋಷಿಸಿದ್ದರು. ಇವರಿಬ್ಬರು ಸೆಪ್ಟೆಂಬರ್ 2020 ರಲ್ಲಿ ಮದುವೆಯಾಗಬೇಕಿತ್ತು ಆದರೆ ಕೋವಿಡ್ -19 ಸಾಂಕ್ರಾಮಿಕದ ಕಾರಣ ಅವರ ಮದುವೆ ಮುಂದೂಡಲಾಗಿತ್ತು.

ಇದನ್ನೂ ಓದಿ:ಅಭಿಮಾನಿಗಳ ಜೊತೆ ಕ್ರೇಜಿಸ್ಟಾರ್‌ ರವಿಚಂದ್ರನ್‌ ಬರ್ತ್‌ಡೇ

Advertisement

“ವಾರಾಂತ್ಯದಲ್ಲಿ ವಿವಾಹವಾದ ಕ್ಯಾಥರೀನ್ ಬ್ರಂಟ್ ಮತ್ತು ನ್ಯಾಟ್ ಸೀವರ್ ಅವರಿಗೆ ನಮ್ಮ ಆತ್ಮೀಯ ಅಭಿನಂದನೆಗಳು” ಎಂದು ಇಂಗ್ಲೆಂಡ್ ಕ್ರಿಕೆಟ್ ಟ್ವೀಟ್ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next