ಪುಣೆ: ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಜ. 14 ರಂದು ಮಕರ ಸಂಕ್ರಮಣ ಆಚರಣೆಯು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಹರೀಶ್ ಭಟ್ ರವರ ನೇತೃತ್ವದಲ್ಲಿ ಪಡಿಪೂಜೆ, ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ನಂತರ, ಪ್ರಸಾದ ವಿತರಣೆ ಅನ್ನ ಸಂತರ್ಪಣೆಯೊಂದಿಗೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಮಹಿಳಾ ಮಂಡಲದ ಸದಸ್ಯೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ ಜರಗಿತು. ಮೊದಲಿಗೆ ಕಾತ್ರಜ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಮಹಿಳಾ ವಿಭಾಗದ ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಅತಿಥಿ-ಗಣ್ಯ ಮಹಿಳೆಯರು ದೀಪ ಬೆಳಗಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸುಲತಾ ಶೆಟ್ಟಿ ಮತ್ತು ಪದಾಧಿಕಾರಿಗಳು, ಪುಣೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ಅಧ್ಯಕ್ಷೆ ದೀಪಾ ರೈ ಮತ್ತು ಪದಾಧಿಕಾರಿಗಳು, ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ಕಾರ್ಯಾಧ್ಯಕ್ಷೆ ಅಂಬಿಕಾ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಪ್ರಮಿಳಾ ಎಸ್. ಶೆಟ್ಟಿ ಮತ್ತು ಪದಾಧಿಕಾರಿಗಳು, ತುಳು ಕೂಟ ಪುಣೆ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ, ಬಿಲ್ಲವ ಸಂಘ ಪುಣೆ, ದೇವಾಡಿಗ ಸಂಘ ಪುಣೆ, ಕುಲಾಲ ಸಂಘ ಪುಣೆಯ ಮಹಿಳಾ ವಿಭಾಗದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಸಂಘ ಸಂಸ್ಥೆಗಳ ಮಹಿಳಾ ವಿಭಾಗದ ಗಣ್ಯರಿಗೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು ಪುಷ್ಪಗುತ್ಛವಿತ್ತು ಗೌರವಿಸಿದರು. ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು ಸಮಿತಿ ಸದಸ್ಯರ ಮುಂದಾಳತ್ವದಲ್ಲಿ ಜರಗಿದ ಈ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಸಿಹಿತಿಂಡಿ ವಿನಿಯೋಗಿಸಿಕೊಂಡು ಶುಭಹಾರೈಸಿಕೊಂಡರು. ಶ್ರೀ ಅಯ್ಯಪ್ಪ ವಿಶ್ವಸ್ತ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಮಹಿಳಾ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ : ಹರೀಶ್ ಮೂಡಬಿದ್ರಿ