Advertisement
ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಹರೀಶ್ ಭಟ್ ಮತ್ತು ತಂಡದವರ ನೇತೃತ್ವದಲ್ಲಿ ಧಾರ್ಮಿಕ ಸೇವಾ ಪೂಜಾ ಕಾರ್ಯಗಳು ನಡೆದವು.
Related Articles
Advertisement
ಕಾತ್ರಜ್ ಅಯ್ಯಪ್ಪ ದೇವಸ್ಥಾನದ ವಾರ್ಷಿಕೋತ್ಸವ ಸಂದರ್ಭದಲ್ಲಿ ಈ ಬಲಿ ಉತ್ಸವ ಸೇವೆಯು ಬಹಳ ಪ್ರಸಿದ್ಧಿಯನ್ನು ಪಡೆದಿದ್ದು,ಈ ಬಲಿ ಉತ್ಸವಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಶ್ರೀ ಅಯ್ಯಪ್ಪ ದೇವರ ಅಲಂಕೃತ ಪ್ರಭಾವಳಿಯನ್ನು ಹೊರುವವರು ನಮ್ಮ ತುಳುನಾಡಿನ ಅತ್ಯಂತ ಪ್ರಸಿದ್ಧಿಯನ್ನು ಪಡೆದವರಾಗಿದ್ದು ಪುಣೆಯಲ್ಲಿ ಈ ದೇವಸ್ಥಾನದ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರತಿ ವರ್ಷವೂ ಆಗಮಿಸುತ್ತಾರೆ. ಊರಿನಿಂದಲೇ ಆಗಮಿಸುವ ವಾದ್ಯ ಘೋಷದ ತಂಡದವರ ಸ್ವರ ನಾದಕ್ಕೆ ಮತ್ತು ಬಲಿ ನರ್ತನ ಸೇವೆಯು ಭಕ್ತರ ಮನದಲ್ಲಿ ಅಚ್ಚಳಿಯದೆ ನೆಲೆ ನಿಲ್ಲುವಂತಾಗಿದೆ.
ಈ ಪುಣ್ಯ ಕಾರ್ಯಗಳಲ್ಲಿ ಪುಣೆ ತುಳು ಕನ್ನಡಿಗರಲ್ಲದೆ ಇತರೆ ಭಾಷಿಕರು, ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಗಂಧಪ್ರಸಾದ ಸ್ವೀಕರಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾದರು. ಮಧ್ಯಾಹ್ನ 1 ರಿಂದ ರಾತ್ರಿಯವರೆಗೆ ಪ್ರಸಾದ ರೂಪದಲ್ಲಿ ಅನ್ನದಾನ ನೆರವೇರಿತು.
ಧಾರ್ಮಿಕ ಕಾರ್ಯಕ್ರಮಗಳ ಜೊತೆ ಜೊತೆಯಾಗಿ ದೇವಸ್ಥಾನದ ಹೋರಾಂಗಣದಲ್ಲಿ ಹಾಕಿದ ರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಧ್ಯಾಹ್ನ 2ರಿಂದ ಮಕ್ಕಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಅಪರಾಹ್ನ 3.30 ರಿಂದ ಶಾರದಾ ಆರ್ಟ್ಸ್ ಮಂಜೇಶ್ವರ ಕಲಾವಿದರಿಂದ ಗಡಿನಾಡ ಕಲಾನಿಧಿ ಕೃಷ್ಣ. ಜೆ.ಮಂಜೇಶ್ವರ ನಿರ್ದೇಶನದ ತುಳುನಾಡ ಕಲಾ ಬಿರ್ಸೆ ದೀಪಕ್ ರೈ ಪಾಣಾಜೆ ಅಭಿನಯದ ನಿತ್ಯೆ ಬನ್ನಗ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.
ಈ ಎಲ್ಲಾ ಕಾರ್ಯಕ್ರಮಗಳು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಸುಭಾಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಶ್ರೀ ಅಯ್ಯಪ್ಪ ಸೇವಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ ಮತ್ತು ಪದಾಧಿಕಾರಿಗಳು, ಶ್ರೀ ಅಯ್ಯಪ್ಪ ಸೇವಾ ಮಹಿಳಾ ಮಂಡಳಿಯ ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು ಮತ್ತು ಭಕ್ತರ ಸಹಕಾರದೊಂದಿಗೆ ಬಹಳ ವಿಜೃಂಭಣೆಯಿಂದ ಜರಗಿತು. ಶ್ರೀ ಅಯ್ಯಪ್ಪ ಸ್ವಾಮೀ ದೇವಸ್ಥಾನದಲ್ಲಿ ಮುಂಬರುವ ಜನವರಿ 14ರ ಮಕರ ಸಂಕ್ರಾಂತಿಯಂದು ವಿಶೇಷ ಪೂಜೆ ಹಾಗು ಧಾರ್ಮಿಕ ಕಾರ್ಯಗಳು ನಡೆಯಲಿವೆ.
ವರದಿ: ಹರೀಶ್ ಮೂಡಬಿದ್ರಿ